ADVERTISEMENT

Karnataka Covid-19 Update: 24 ಗಂಟೆಗಳಲ್ಲಿ 1,003 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 14:33 IST
Last Updated 17 ಸೆಪ್ಟೆಂಬರ್ 2021, 14:33 IST
ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುತ್ತಿರುವ ಯುವತಿ-ಸಂಗ್ರಹ ಚಿತ್ರ
ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುತ್ತಿರುವ ಯುವತಿ-ಸಂಗ್ರಹ ಚಿತ್ರ   

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 1,003 ಹೊಸ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 18 ಮಂದಿ ಮೃತಪಟ್ಟಿದ್ದಾರೆ ಹಾಗೂ 1,199 ಮಂದಿ ಗುಣಮುಖರಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಪ್ರಕಟಿಸಿದೆ.

ಪ್ರಸ್ತುತ ರಾಜ್ಯದಲ್ಲಿ 15,960 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್‌ ದೃಢ ಪ್ರಮಾಣ ಶೇ 0.67 ಮತ್ತು ಕೋವಿಡ್‌ನಿಂದ ಮೃತಪಟ್ಟವರ ಪ್ರಮಾಣ ಶೇ 1.79ರಷ್ಟು ದಾಖಲಾಗಿದೆ.

ಒಂದು ದಿನದ ಅವಧಿಯಲ್ಲಿ 1.48 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ‌ಸೋಂಕು ದೃಢ ಪ್ರಮಾಣವು ಶೇ 0.67 ರಷ್ಟು ವರದಿಯಾಗಿದೆ.13 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 10 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಹಾವೇರಿ, ಕೊಪ್ಪಳ ಹಾಗೂ ವಿಜಯಪುರದಲ್ಲಿಹೊಸಪ್ರಕರಣವರದಿಯಾಗಿಲ್ಲ.

ADVERTISEMENT

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 124, ಕೊಡಗಿನಲ್ಲಿ 96 ಹಾಗೂ ಮೈಸೂರಿನಲ್ಲಿ 47 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 310, ಉಡುಪಿಯಲ್ಲಿ 94 ಹಾಗೂ ತುಮಕೂರಿನಲ್ಲಿ 61 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 50ರ ಗಡಿಯೊಳಗೆ ಇವೆ.

ಕೋವಿಡ್ಪೀಡಿತರಲ್ಲಿ18 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ.10 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 6, ಬೆಳಗಾವಿಯಲ್ಲಿ 3 ಹಾಗೂ ದಕ್ಷಿಣ ಕನ್ನಡದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಉತ್ತರ ಕನ್ನಡ ಸೇರಿದಂತೆ 7 ಜಿಲ್ಲೆಗಳಲ್ಲಿತಲಾ ಒಬ್ಬರು ಮೃತಪಟ್ಟಿದ್ದಾರೆ.ಮರಣ ಪ್ರಮಾಣ ದರವು ಶೇ 1.79 ರಷ್ಟು ವರದಿಯಾಗಿದೆ.ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,573ಕ್ಕೆ ತಲುಪಿದೆ.

ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.66 ಲಕ್ಷ ದಾಟಿದೆ. ಗುಣಮುಖರಾದವರ ಒಟ್ಟು ಸಂಖ್ಯೆ 29.12 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.