ADVERTISEMENT

Karnataka Covid-19 Update: ಮೃತರ ಸಂಖ್ಯೆ 37,717ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2021, 22:17 IST
Last Updated 25 ಸೆಪ್ಟೆಂಬರ್ 2021, 22:17 IST
   

ಬೆಂಗಳೂರು:ಕೋವಿಡ್ಪೀಡಿತರಲ್ಲಿ 11 ಮಂದಿ ಮೃತಪಟ್ಟಿರುವುದು ಶನಿವಾರ ದೃಢಪಟ್ಟಿದೆ. ಈವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 37,717ಕ್ಕೆ ಏರಿಕೆಯಾಗಿದೆ.

ಹೊಸದಾಗಿ 787 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕಿತರಾದವರ ಒಟ್ಟು ಸಂಖ್ಯೆ 29.72 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 1.40 ಲಕ್ಷ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ‌ಸೋಂಕು ದೃಢ ಪ್ರಮಾಣವು ಶೇ 0.55 ರಷ್ಟು ವರದಿಯಾಗಿದೆ. 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 12 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ ಹಾಗೂ ವಿಜಯಪುರದಲ್ಲಿ ಹೊಸ ಪ್ರಕರಣ ವರದಿಯಾಗಿಲ್ಲ.

ಕೇರಳಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡದಲ್ಲಿ 127, ಮೈಸೂರಿನಲ್ಲಿ 65 ಹಾಗೂ ಕೊಡಗಿನಲ್ಲಿ 25 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರಿನಲ್ಲಿ 276 ಹಾಗೂ ಉಡುಪಿಯಲ್ಲಿ 68 ಮಂದಿ ಸೋಂಕಿತರಾಗಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಹೊಸ ‍ಪ್ರಕರಣಗಳು 50ರ ಗಡಿಯೊಳಗೆ ಇವೆ.

ADVERTISEMENT

ಸೋಂಕಿತರಲ್ಲಿ 775 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.21 ಲಕ್ಷ ದಾಟಿದೆ. ಕೋವಿಡ್ಸಕ್ರಿಯ ಪ್ರಕರಣಗಳ ಸಂಖ್ಯೆ 13,307ಕ್ಕೆ ಏರಿಕೆಯಾಗಿದೆ.

6 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 4, ಬೆಳಗಾವಿ ಹಾಗೂ ಚಿಕ್ಕಮಗಳೂರಿನಲ್ಲಿ ತಲಾಇಬ್ಬರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಉಡುಪಿಯಲ್ಲಿ ತಲಾ ಒಬ್ಬರು ಸಾವಿಗೀಡಾಗಿದ್ದಾರೆ.ಮರಣ ಪ್ರಮಾಣ ದರವು ಶೇ 1.39 ರಷ್ಟು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.