ADVERTISEMENT

ರಾಜ್ಯದಲ್ಲಿ 18ರಿಂದ 44 ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ

​ಪ್ರಜಾವಾಣಿ ವಾರ್ತೆ
Published 12 ಮೇ 2021, 16:55 IST
Last Updated 12 ಮೇ 2021, 16:55 IST
ನಿಮ್ಹಾನ್ಸ್‌ನಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿರುವ ಯುವತಿ
ನಿಮ್ಹಾನ್ಸ್‌ನಲ್ಲಿ ಲಸಿಕೆ ಹಾಕಿಸಿಕೊಳ್ಳುತ್ತಿರುವ ಯುವತಿ   

ಬೆಂಗಳೂರು:18ರಿಂದ 44 ವರ್ಷ ವಯೋಮಾನದವರಿಗೆ ಲಸಿಕೆ ಹಾಕುವ ಅಭಿಯಾನವನ್ನು ಮೇ 14ರಿಂದ ತಾತ್ಕಾಲಿಕವಾಗಿ ರಾಜ್ಯ ಸರ್ಕಾರ ಸ್ಥಗಿತಗೊಳಿಸಲಿದೆ.

ಎಲ್ಲ ಸರ್ಕಾರಿ ಲಸಿಕಾ ಕೇಂದ್ರಗಳಿಗೆ ಈ ಆದೇಶ ಅನ್ವಯ ಆಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಈಗಾಗಲೇ ಕೇಂದ್ರ ಸರ್ಕಾರ ನೀಡಿದ ಮತ್ತು ರಾಜ್ಯ ಸರ್ಕಾರ ನೇರವಾಗಿ ಖರೀದಿಸಿದ ಲಸಿಕೆ ದಾಸ್ತಾನನ್ನು 45 ವರ್ಷ ದಾಟಿದವರಿಗೆ ಎರಡನೇ ಡೋಸ್‌ ನೀಡಲು ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಇಲಾಖೆ ಹೇಳಿದೆ.

ADVERTISEMENT

ಇದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರವು ಸಹ ಕೋವಿಡ್ ಲಸಿಕೆಯ ಕೊರತೆ ಹಿನ್ನೆಲೆಯಲ್ಲಿ 18–44 ವರ್ಷ ವಯೋಮಿತಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡಿಕೆಯನ್ನು ಸ್ಥಗಿತ ಮಾಡಿತ್ತು. ಅಲ್ಲಿಯೂ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.