ADVERTISEMENT

ಬಿಜೆಪಿ ನಾಯಕರ ಕಾರು ಹಾದು ಹೋಗುವಾಗ ರೆಕಾರ್ಡ್‌ ಮಾಡ್ಕೊಳ್ಳಿ: ಡಿಕೆಶಿ ಮನವಿ!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಅಕ್ಟೋಬರ್ 2021, 15:04 IST
Last Updated 7 ಅಕ್ಟೋಬರ್ 2021, 15:04 IST
ಡಿ.ಕೆ ಶಿವಕುಮಾರ್‌
ಡಿ.ಕೆ ಶಿವಕುಮಾರ್‌    

ಬೆಂಗಳೂರು: ‘ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ...’

ಹೀಗೆ ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ಬಿಜೆಪಿಯನ್ನು ವ್ಯಂಗ್ಯವಾಡಿದ್ದಾರೆ.

ಉತ್ತರ ಪ್ರದೇಶದ ಲಖಿಂಪುರ ಎಂಬಲ್ಲಿ ಇತ್ತೀಚೆಗೆ ಪ್ರತಿಭಟನಾ ನಿರತ ರೈತರ ಮೇಲೆ ಎಸ್‌ಯುವಿ ಹರಿದಿದ್ದು, ಘಟನೆಯಲ್ಲಿ ನಾಲ್ವರು ರೈತರು ಮೃತಪಟ್ಟಿದ್ದಾರೆ. ಅಪಘಾತಕ್ಕೆ ಕಾರಣವಾದ ಎಸ್‌ಯುವಿಯನ್ನು ಬಿಜೆಪಿ ನಾಯಕ, ಕೇಂದ್ರ ಸಚಿವಅಜಯ್‌ ಮಿಶ್ರಾ ಅವರ ಮಗನೇ ಚಾಲನೆ ಮಾಡುತ್ತಿದ್ದ ಎಂದು ರೈತರು ಆರೋಪಿಸಿದ್ದಾರೆ. ಆದರೆ ಅಜಯ್‌ ಮಿಶ್ರಾ ಅವರು ಈ ಆರೋಪವನ್ನು ಅಲ್ಲಗಳೆದಿದ್ದಾರೆ.

ADVERTISEMENT

ಇದೇ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ ನಾಯಕ ಡಿ.ಕೆ ಶಿವಕುಮಾರ್‌, ‘ಸಾರ್ವಜನಿಕರಲ್ಲಿ ಮನವಿ: ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವಿಡಿಯೊ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿರಲಿದೆ,‘ ಎಂದು ಗೇಲಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.