ADVERTISEMENT

ಟಿಕೆಟ್‌ ಹಂಚಿಕೆ ವೇಳೆ ಹಿಂದುಳಿದವರಿಗೆ ಆದ್ಯತೆ ನೀಡಲು ಮನವಿ: ಮಧು ಬಂಗಾರಪ್ಪ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2023, 18:07 IST
Last Updated 23 ಮಾರ್ಚ್ 2023, 18:07 IST
   

ಶಿವಮೊಗ್ಗ: ‘ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಮತದಾರರ ಸಂಖ್ಯೆ ಶೇ 55ರಷ್ಟಿದ್ದು, ಟಿಕೆಟ್ ಹಂಚಿಕೆ ವೇಳೆ ಈ ವರ್ಗದ ಅಭ್ಯರ್ಥಿಗಳಿಗೆ ಆದ್ಯತೆ ನೀಡುವಂತೆ ಹೈಕಮಾಂಡ್‌ಗೆ ಮನವಿ ಮಾಡಲಾಗಿದೆ’ ಎಂದು ಕೆಪಿಸಿಸಿ ಹಿಂದುಳಿದ ವರ್ಗಗಳ ಸಮಿತಿ ಅಧ್ಯಕ್ಷ ಮಧು ಬಂಗಾರಪ್ಪ ಹೇಳಿದರು.

‘ಕಾಂಗ್ರೆಸ್‌ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರಬೇಕಿದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‘ಶಿವಮೊಗ್ಗದಲ್ಲಿ ಶಾಸಕ ಕೆ.ಎಸ್.ಈಶ್ವರಪ್ಪ ಹಾಗೂ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ನಡುವಿನ ‘ಧಾರಾವಾಹಿ’ಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ. ಅದರ ನಿರ್ಮಾಣ ಹಾಗೂ ಪ್ರಾಯೋಜಕತ್ವವೂ ನಮ್ಮದಲ್ಲ’ ಎಂದು ಪ್ರತಿಕ್ರಿಯಿಸಿದ ಅವರು, ‘ಆಯನೂರು ಅವರಿಗೆ ಕಾಂಗ್ರೆಸ್‌ ಟಿಕೆಟ್ ಕೊಡಲಿದೆ ಎಂಬುದೆಲ್ಲ ಊಹಾಪೋಹ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.