ADVERTISEMENT

ಮಲೆ ಮಹದೇಶ್ವರ ವನ್ಯಧಾಮ ಹುಲಿ ಸಂರಕ್ಷಿತ ಪ್ರದೇಶ ?

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2021, 22:43 IST
Last Updated 21 ಸೆಪ್ಟೆಂಬರ್ 2021, 22:43 IST

ಬೆಂಗಳೂರು: ಗಡಿ ಜಿಲ್ಲೆ ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಿ ರಾಜ್ಯ ಸರ್ಕಾರ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸಲಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ.

ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರವು ಒಪ್ಪಿಗೆ ಸೂಚಿಸಿದ್ದು, ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸುವುದಷ್ಟೇ ಬಾಕಿ ಇದೆ.

ಅರಣ್ಯ ಸಚಿವ ಉಮೇಶ ಕತ್ತಿ ಅವರು ಅಧಿಸೂಚನೆ ಹೊರಡಿಸುವ ಸಂಬಂಧ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ADVERTISEMENT

ಮುಖ್ಯಮಂತ್ರಿಗಳ ಗಮನಕ್ಕೆ ತಂದ ಬಳಿಕ, ವಾರದೊಳಗೆ ಅಧಿಸೂಚನೆ ಹೊರ ಬೀಳಲಿದೆ ಎಂದು ತಿಳಿದು‌ ಬಂದಿದೆ.

ಮಲೆ ಮಹದೇಶ್ವರ ವನ್ಯಧಾಮದಲ್ಲಿ 18ರಿಂದ 24 ಹುಲಿಗಳು ಇರಬಹುದು ಎಂದು ಅಂದಾಜಿಸಲಾಗಿದೆ.ಈ ವನ್ಯಧಾಮವು ಹುಲಿ ಸಂರಕ್ಷಿತಪ್ರದೇಶ ಎಂದು ಘೋಷಣೆಯಾದರೆ, ಜಿಲ್ಲೆಯ ಮೂರನೇ ಹುಲಿ ಸಂರಕ್ಷಿತ ಪ್ರದೇಶವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.