ADVERTISEMENT

ಮೈಸೂರು ಅರಮನೆ, ಮೃಗಾಲಯ ಜುಲೈ 5 ರಿಂದ ವೀಕ್ಷಣೆಗೆ ಮುಕ್ತ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 11:33 IST
Last Updated 4 ಜುಲೈ 2021, 11:33 IST
ಮೈಸೂರು ಅರಮನೆ
ಮೈಸೂರು ಅರಮನೆ   

ಮೈಸೂರು: ಕೋವಿಡ್‌ ಲಾಕ್‌ಡೌನ್‌ ಕಾರಣ ಮುಚ್ಚಲಾಗಿದ್ದ ಮೈಸೂರು ಅರಮನೆ ಹಾಗೂ ಚಾಮರಾಜೇಂದ್ರ ಮೃಗಾಲಯವು ಜುಲೈ 5 ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಲಿದೆ.

‘ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 5.30ರ ವರೆಗೆ ಅರಮನೆಯನ್ನು ಸಾರ್ವಜನಿಕರ ವೀಕ್ಷಣೆಗೆ ತೆರೆಯಲಾಗುವುದು. ಪ್ರವಾಸಿಗರು ಅರಮನೆಯ ವೆಬ್‌ಸೈಟ್‌ನಲ್ಲಿ (www.mysorepalace.gov.in) ಆನ್‌ಲೈನ್‌ ಮೂಲಕ ಟಿಕೆಟ್‌ ಕಾಯ್ದಿರಿಸಬಹುದು. ಅರಮನೆ ದ್ವಾರದ ಬಳಿಯ ಟಿಕೆಟ್‌ ಕೌಂಟರ್‌ನಲ್ಲೂ ಟಿಕೆಟ್‌ ಖರೀದಿಸಬಹುದು’ ಎಂದು ಮೈಸೂರು ಅರಮನೆ ಮಂಡಳಿಯ ಉಪನಿರ್ದೇಶಕ ಟಿ.ಎಸ್‌.ಸುಬ್ರಮಣ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಪ್ರವಾಸಿಗರಿಗೆ ಪ್ರವೇಶ ದ್ವಾರಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌, ಸ್ಯಾನಿಟೈಸರ್‌ ಬಳಕೆಗೆ ವ್ಯವಸ್ಥೆ ಮಾಡಲಾಗಿದೆ. ಅರಮನೆಯ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ’ ಎಂದಿದ್ದಾರೆ.

ADVERTISEMENT

ಮೃಗಾಲಯ, ಕಾರಂಜಿ ಕೆರೆ ಮುಕ್ತ: ‘ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆಯನ್ನು ಸೋಮವಾರದಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆಯಲು ಉದ್ದೇಶಿಸಲಾಗಿದೆ’ ಎಂದು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋವಿಡ್ ಎರಡನೇ ಅಲೆಯ ಕಾರಣ ಏಪ್ರಿಲ್‌ 24 ರಿಂದ ಮೈಸೂರು ಅರಮನೆ ಮತ್ತು ಮೃಗಾಲಯ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಬಂಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.