ADVERTISEMENT

ಹೊಸ ಪಿಯುಸಿ ಕಾಲೇಜು: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 18 ಜುಲೈ 2021, 17:00 IST
Last Updated 18 ಜುಲೈ 2021, 17:00 IST

‌ಬೆಂಗಳೂರು: ರಾಜ್ಯದಲ್ಲಿ 2021-22 ನೇ ಶೈಕ್ಷಣಿಕ ಸಾಲಿನಲ್ಲಿ ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕಾಲೇಜು ಆರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳು, ಟ್ರಸ್ಟ್‌ಗಳು ಆನ್‌ಲೈನ್ ಮೂಲಕ ಇದೇ 19 ರಿಂದ 26 ರವರೆಗೆ ಹೆಸರು ನೋಂದಾಯಿಸಿಕೊಳ್ಳಬಹುದು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್‌ನಿಂದ (www.pue.kar.nic.in) ಪಡೆಯಬಹುದು.

ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜು ಮಂಜೂರು ಕೋರಿ 2019-20 ಮತ್ತು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಟ್ರಸ್ಟ್‌ಗಳು ಮತ್ತೆ ಅರ್ಜಿ ಸಲ್ಲಿಸುವ ಅಗತ್ಯ ಇಲ್ಲ. ಅರ್ಜಿ ತಿರಸ್ಕೃತಗೊಂಡಿದ್ದಲ್ಲಿ ಅಥವಾ ಆಕ್ಷೇಪಣೆ ಇದ್ದರೆ, 2021-22ನೇ ಸಾಲಿನ ಸ್ಥಳ ಪರಿಶೀಲನೆ ಸಮಿತಿ ವರದಿಯೊಂದಿಗೆ ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರ ಮೂಲಕ ಪ್ರಸ್ತಾವನೆ ಸಲ್ಲಿಸಬೇಕು ಎಂದೂ ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.