ADVERTISEMENT

ಪಂ.ಮಧೂಪ್ ಮುದ್ಗಲ್‌ಗೆ ರಾಜಗುರು ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2022, 22:20 IST
Last Updated 19 ಆಗಸ್ಟ್ 2022, 22:20 IST
ಪಂ. ಮಧೂಪ್ ಮುದ್ಗಲ್‌
ಪಂ. ಮಧೂಪ್ ಮುದ್ಗಲ್‌   

ಧಾರವಾಡ: ಸ್ವರ ಸಾಮ್ರಾಟ ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಸ್ಮಾರಕ ಟ್ರಸ್ಟ್‌ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಹಿಂದೂಸ್ತಾನಿ ಸಂಗೀತದ ಹಿರಿಯ ಗಾಯಕ ದೆಹಲಿಯ ಪಂ.ಮಧೂಪ್ ಮುದ್ಗಲ್‌ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹ 1ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಇವರೊಂದಿಗೆ ಬೆಂಗಳೂರಿನ ಹಾರ್ಮೋನಿಯಂ ವಾದಕ ಸತೀಶ್ ಕೊಳ್ಳಿ ಹಾಗೂ ಪುಣೆಯ ಗಾಯಕ ವಿರಾಜ್ ಜೋಶಿ ‘ಯುವ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ ₹ 25ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ.

ಪಂ.ರಾಜಗುರು ಅವರ 102ನೇ ಜನ್ಮದಿನಾಚರಣೆ ಅಂಗವಾಗಿ ಇದೇ 24ರಂದು ಸಂಜೆ 5.30ಕ್ಕೆ ನಗರದ ಸೃಜನಾ ರಂಗಮಂದಿರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಇದರೊಂದಿಗೆ ಪ್ರಶಸ್ತಿ ಪುರಸ್ಕೃತರ ಸಂಗೀತ ಕಛೇರಿ ಯನ್ನೂ ಆಯೋಜಿಸಲಾಗಿದೆಎಂದು ಪ್ರಕಟಣೆತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.