ADVERTISEMENT

ದ್ವಿತೀಯ ಪಿಯುಸಿ ಫಲಿತಾಂಶ ಇಂದು

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 19:40 IST
Last Updated 19 ಜುಲೈ 2021, 19:40 IST
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಕೆಲ ತಿಂಳ ಹಿಂದೆ  ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿಗೆ ಭೇಟಿ ನೀಟಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ್ದರು
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ಕೆಲ ತಿಂಳ ಹಿಂದೆ ಚಾಮರಾಜನಗರದ ಜೆಎಸ್‌ಎಸ್‌ ಕಾಲೇಜಿಗೆ ಭೇಟಿ ನೀಟಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ್ದರು    

ಬೆಂಗಳೂರು: 2020–21ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯು ಫಲಿತಾಂಶ ಮಂಗಳವಾರ (ಜುಲೈ 20) ಪ್ರಕಟವಾಗಲಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಹಾಗೂ ಶೈಕ್ಷಣಿಕ ಚಟುವಟಿಕೆಗೆ ನೀಡಿದ ಅಂಕಗಳ ಆಧಾರದಲ್ಲಿ ಫಲಿತಾಂಶ ನಿರ್ಣಯ ಆಗಲಿದೆ.

ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಹೊಸ ವಿದ್ಯಾರ್ಥಿಗಳು, ಪುನರಾವರ್ತಿತರ ಫಲಿತಾಂಶವನ್ನು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್ ಬಿಡುಗಡೆ ಮಾಡಲಿದ್ದಾರೆ. ಸಂಜೆ 4ಗಂಟೆ ಬಳಿಕ https://karresults.nic.in/ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಫಲಿತಾಂಶ ವೀಕ್ಷಿಸಲು ಈಗಾಗಲೇ ನೋಂದಣಿ ಸಂಖ್ಯೆ ನೀಡಲಾಗಿದೆ. ಸಂಖ್ಯೆ ಸಿಗದ ವಿದ್ಯಾರ್ಥಿಗಳು http://pue.kar.nic.in/ ನಲ್ಲಿ know my registration number ಲಿಂಕ್ ಮೂಲಕ ಕಲಿಯುತ್ತಿರುವ ಜಿಲ್ಲೆ, ಕಾಲೇಜುಆಯ್ಕೆ ಮಾಡಿಕೊಂಡು ಪಡೆಯಬಹುದು. ಖಾಸಗಿ ಅಭ್ಯರ್ಥಿಗಳಿಗೆ ಪರೀಕ್ಷೆ ಬಳಿಕ ಫಲಿತಾಂಶ ಪ್ರಕಟವಾಗಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.