ADVERTISEMENT

ಸಾಮಾಜಿಕ ಜಾಲತಾಣ ಬಳಸಲು ಅಧಿಕಾರಿಗಳಿಗೆ ಹಾಗೂ ನೌಕರರಿಗೆ ನಿರ್ಬಂಧ ವಿಧಿಸಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 16:23 IST
Last Updated 18 ಸೆಪ್ಟೆಂಬರ್ 2021, 16:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸಾಮಾಜಿಕ ಮಾಧ್ಯಮಗಳನ್ನು ವೇದಿಕೆಗಳನ್ನಾಗಿ ಬಳಸಿಕೊಂಡು ಸರ್ಕಾರದ ಸಾಧನೆಗಳನ್ನು ಅಧಿಕಾರಿಗಳ ಅಥವಾ ನೌಕರರ ವೈಯಕ್ತಿಕ ಸಾಧನೆ ಎಂದು ಪ್ರದರ್ಶಿಸಿಕೊಳ್ಳುವುದನ್ನು ಸರ್ಕಾರ ಕಡ್ಡಾಯವಾಗಿ ನಿಷೇಧಿಸಿದೆ.

ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಮುಖ್ಯಕಾರ್ಯದರ್ಶಿ ಪಿರವಿಕುಮಾರ್, ನಿಯಮ ಉಲ್ಲಂಘಿಸಿದರೆ ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮಗಳು 2021ರ ಅನ್ವಯ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

‘ಸರ್ಕಾರದ ಅಧಿಕೃತ ಮಾಹಿತಿಯನ್ನು ಪ್ರಸಾರ ಮಾಡುವುದೂ ಸೇರಿದಂತೆ ಅಧಿಕೃತ ಕರ್ತವ್ಯ ನಿರ್ವಹಿಸಲು ಮಾತ್ರ ಅಧಿಕಾರಿಗಳು ಇಲಾಖೆ/ ಕಚೇರಿಯ ಹೆಸರಿನಲ್ಲಿ ತೆರೆದ ಸಾಮಾಜಿಕ ಮಾಧ್ಯಮಗಳ ಖಾತೆಗಳನ್ನು ಬಳಸಬಹುದು. ವೈಯಕ್ತಿಕ ಖಾತೆಯನ್ನು ಈ ಉದ್ದೇಶಕ್ಕೆ ಬಳಸುವಂತಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಕುಂದು ಕೊರತೆ ವ್ಯಕ್ತಪಡಿಸಲು, ತಮ್ಮ ಅನಿಸಿಕೆಗಳನ್ನು ಹೇಳಿ ಸರ್ಕಾರದ ವರ್ಚಸ್ಸಿಗೆ ಧಕ್ಕೆ ಅಥವಾ ಮುಜುಗರ ಉಂಟು ಮಾಡುವ ಕೃತ್ಯದಲ್ಲಿ ತೊಡಗಿದರೆ ಶಿಸ್ತುಕ್ರಮ ಅನಿವಾರ್ಯ. ಪ್ರತಿಕೂಲ ಟೀಕೆ ಅಥವಾ ಮಾನಹಾನಿಯ ಸಂದರ್ಭದಲ್ಲಿ ನಿರ್ದಿಷ್ಟ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೇ ತಮ್ಮ ಸಮರ್ಥನೆಗಾಗಿ ಪತ್ರಿಕೆ, ಮಾಧ್ಯಮ ಅಥವಾ ನ್ಯಾಯಾಲಯದ ಮೊರೆ ಹೋಗುವಂತಿಲ್ಲ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.