ADVERTISEMENT

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: 7.38 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣ

​ಪ್ರಜಾವಾಣಿ ವಾರ್ತೆ
Published 19 ಮೇ 2022, 8:57 IST
Last Updated 19 ಮೇ 2022, 8:57 IST
 ಬಿ.ಸಿ. ನಾಗೇಶ್
ಬಿ.ಸಿ. ನಾಗೇಶ್   

ಬೆಂಗಳೂರು: 2021–22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಶೇ 85.63ರಷ್ಟು ಫಲಿತಾಂಶ ಬಂದಿದೆ. 7.38ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದುಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ಒಟ್ಟು 8.53ಲಕ್ಷ ಜನ ಪರೀಕ್ಷೆಗೆ ಹಾಜರಾಗಿದ್ದರು. ಇವರ ಪೈಕಿ 7.38ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

145 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ.

ADVERTISEMENT

227 ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಿತು. 52,219 ಮೌಲ್ಯಮಾಪಕರು ಉತ್ತರಪತ್ರಿಕೆಗಳ ಮೌಲ್ಯಮಾಪನ ಮಾಡಿದ್ದಾರೆ’ ಎಂದು ಸಚಿವರು ಮಾಹಿತಿ ನೀಡಿದರು..

ವಿದ್ಯಾರ್ಥಿಗಳು ಫಲಿತಾಂಶವನ್ನು ಈ ವೆಬ್‌ ಸೈಟ್‌ಗಳ ಮೂಲಕ ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.