ADVERTISEMENT

ಹಾಸಿಗೆ ದಂಧೆ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡದ ಶಂಕೆ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 5 ಮೇ 2021, 7:59 IST
Last Updated 5 ಮೇ 2021, 7:59 IST
   

ಶಿವಮೊಗ್ಗ: ಬೆಂಗಳೂರಿನಲ್ಲಿ ಹಣ ಕೊಟ್ಟರೆ ಹಾಸಿಗೆ ಕಾಯ್ದಿರಿಸುವ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಶಂಕೆ ವ್ಯಕ್ತವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ನಗರದಲ್ಲಿ ಬುಧವಾರ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್‌ ರೆಡ್ಡಿ, ರವಿ ಸುಬ್ರಹ್ಮಣ್ಯ ಅವರು ಹಗರಣ ಬಯಲಿಗೆ ಎಳೆದಿದ್ದಾರೆ. ರಾಜ್ಯದಲ್ಲಿ ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಸೂಕ್ತವಾಗಿ ನಿಭಾಯಿಸುತ್ತಿದೆ. ಆಮ್ಲಜನಕ ಪೂರೈಕೆ, ಲಸಿಕೆ ನೀಡುವಿಕೆಯಲ್ಲಿ ಸಮರ್ಪಕವಾಗಿ ಕೆಲಸ ಮಾಡುತ್ತಿದೆ. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಇಂತಹ ಸಮಚು ಮಾಡಲಾಗುತ್ತಿದೆ. ಇಂತಹ ಕೃತ್ಯಗಳ ಹಿಂದೆ ಯಾರೇ ಇದ್ದರೂ ತನಿಖೆ ನಡೆಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.