ADVERTISEMENT

ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ: ಅಶ್ವತ್ಥ ನಾರಾಯಣ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 15:42 IST
Last Updated 3 ಮಾರ್ಚ್ 2021, 15:42 IST
   

ಶಿವಮೊಗ್ಗ: ರಮೇಶ್ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ನಡೆದಿದೆ. ಉದ್ದೇಶಪೂರ್ವಕವಾಗಿ ಹಗರಣದಲ್ಲಿ ಸಿಲುಕಿಸಿರುವ ಶಂಕೆ ಇದೆ. ತನಿಖೆಯಿಂದ ಸತ್ಯ ಹೊರಬರಲಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಹೆಲಿಪ್ಯಾಡ್‌ನಲ್ಲಿ ಬುಧವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.

ಮೂರನೇ ವ್ಯಕ್ತಿ ದೂರು ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಸತ್ಯ ತಿಳಿಯಲು ಕಾಲವಕಾಶಬೇಕಿದೆ. ಪಕ್ಷದ ವರಿಷ್ಠರು ಗಮನಿಸುತ್ತಿದ್ದಾರೆ. ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

ಮೀಸಲಾತಿ ಪರಿಶೀಲನೆಗೆ ಸರ್ಕಾರ ಸಮಿತಿ ರಚಿಸಿದೆ. ವರದಿಯ ನಂತರ ಯಾವ ಸಮುದಾಯಕ್ಕೆ ಎಷ್ಟು ಪ್ರಮಾಣದ ಮೀಸಲಾತಿ ಎಂದು ನಿರ್ಧರಿಸಲಾಗುವುದು. ಎಲ್ಲಾ ಹಿಂದುಳಿದ ಸಮುದಾಯಗಳಿಗೂ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.