ADVERTISEMENT

ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2023, 19:01 IST
Last Updated 25 ಮಾರ್ಚ್ 2023, 19:01 IST
   

ಬೆಂಗಳೂರು: ದಕ್ಷಿಣ ಒಳನಾಡಿನ ಕೆಲವೆಡೆ ಎರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಕೊಡುಗು ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಒಳನಾಡಿನ ಉಳಿದೆಡೆ ಒಣಹವೆ ಇರುವ ಸಾಧ್ಯತೆ ಇದೆ ಎಂದು ಇಲಾಖೆ
ಹೇಳಿದೆ.

ಗರಿಷ್ಠ ಉಷ್ಣಾಂಶವು ಉತ್ತರ ಒಳನಾಡಿನ ಒಂದೆರಡು ಕಡೆ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಕಡಿಮೆ, ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2–3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗುವ ಸಾಧ್ಯತೆಯಿದೆ. ಶನಿವಾರ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ (38.2 ಡಿಗ್ರಿ ಸೆಲ್ಸಿಯಸ್) ಹಾಗೂ ಧಾರವಾಡದಲ್ಲಿ ಕನಿಷ್ಠ ಉಷ್ಣಾಂಶ (15.6 ಡಿಗ್ರಿ ಸೆಲ್ಸಿಯಸ್) ದಾಖಲಾಗಿದೆ ಎಂದು ಇಲಾಖೆ
ತಿಳಿಸಿದೆ.

ADVERTISEMENT

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಅವಧಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.