ADVERTISEMENT

ವೀರಪ್ಪ ಮೊಯಿಲಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 13:30 IST
Last Updated 12 ಮಾರ್ಚ್ 2021, 13:30 IST
veerappa m
veerappa m   

ಬೆಂಗಳೂರು: ಕೇಂದ್ರ ಸಾಹಿತ್ಯ ಅಕಾಡೆಮಿಯು 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಶುಕ್ರವಾರ ಪ್ರಕಟಿಸಿದ್ದು, ಕನ್ನಡ ಭಾಷೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಲೇಖಕ ವೀರಪ್ಪ ಮೊಯಿಲಿ ಅವರ ‘ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಮಹಾಕಾವ್ಯ ಆಯ್ಕೆಯಾಗಿದೆ.

ಪ್ರಶಸ್ತಿಯು ₹ 1 ಲಕ್ಷ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ‘ಬಾಲ ಸಾಹಿತ್ಯ ಪುರಸ್ಕಾರ’ಕ್ಕೆ ಹ.ಸ. ಬ್ಯಾಕೋಡ ಅವರ ‘ನಾನೂ ಅಂಬೇಡ್ಕರ್’ ಕಾದಂಬರಿ ಆಯ್ಕೆಯಾಗಿದೆ. ಅಕಾಡೆಮಿಯ ‘ಯುವ ಪುರಸ್ಕಾರ’ಕ್ಕೆ ಕೆ.ಎಸ್. ಮಹದೇವಸ್ವಾಮಿ ಭಾಜನಾರಾಗಿದ್ದಾರೆ. ಈ ಎರಡೂ ಪುರಸ್ಕಾರಗಳು ತಲಾ ₹ 50 ಸಾವಿರ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.

ಇಂಗ್ಲಿಷ್, ಹಿಂದಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ಪ್ರಶಸ್ತಿಗೆ ತಲಾ ಒಂದು ಕೃತಿಯನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪ್ರದಾನ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.