ADVERTISEMENT

ಪ್ರಜಾವಾಣಿ– ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ ಇಂದು

​ಪ್ರಜಾವಾಣಿ ವಾರ್ತೆ
Published 19 ಮೇ 2017, 20:15 IST
Last Updated 19 ಮೇ 2017, 20:15 IST
ಪ್ರಜಾವಾಣಿ– ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ  ಇಂದು
ಪ್ರಜಾವಾಣಿ– ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ ಇಂದು   

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ (ಮೇ 20) ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಹೇರೋಹಳ್ಳಿ 1ನೇ ಹಂತದ ಬಿಇಎಲ್‌ ಬಡಾವಣೆಯಲ್ಲಿರುವ ಸ್ವಾಮಿ ವಿವೇಕಾನಂದ ಯೋಗ ಕೇಂದ್ರದಲ್ಲಿ  ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.

ಈ ಕ್ಷೇತ್ರದ ಶಾಸಕ ಎಸ್‌.ಟಿ. ಸೋಮಶೇಖರ್‌, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 20ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.