ADVERTISEMENT

22ರಂದು ಪ್ರಜಾವಾಣಿ, ಡೆಕ್ಕನ್‌ಹೆರಾಲ್ಡ್‌ ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 11 ಜುಲೈ 2017, 19:30 IST
Last Updated 11 ಜುಲೈ 2017, 19:30 IST

ಬೆಂಗಳೂರು: ನೀವು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ನಿವಾಸಿಯೇ? ನೀವು ಓಡಾಡುವ ರಸ್ತೆಯಲ್ಲಿ ಗುಂಡಿ ಬಿದ್ದಿದೆಯೇ? ಜಲಮಂಡಳಿ ಸಮರ್ಪಕವಾಗಿ ನೀರು ಪೂರೈಸುತ್ತಿಲ್ಲವೆ?  ನಿತ್ಯ ವಿಹರಿಸುವ ಉದ್ಯಾನ ಪಾಳುಬಿದ್ದಿದೆಯೇ?

ಹಾಗಾದರೆ, ಜುಲೈ 22ರಂದು ಬೆಳಿಗ್ಗೆ 10ಕ್ಕೆ ಸುಧಾಮನಗರದ ರಾಜಾರಾಮ್‌ ಮೋಹನ್‌ ರಾಯ್‌ ಎಕ್ಸ್‌ಟೆನ್ಷನ್‌ನ ಲಾಲ್‌ಬಾಗ್‌ ಮುಖ್ಯರಸ್ತೆಯಲ್ಲಿರುವ ಹಕ್‌ ಹೌಸ್‌ಗೆ ಬನ್ನಿ.

ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ. ಚಿಕ್ಕಪೇಟೆ ಕ್ಷೇತ್ರದ ಶಾಸಕ ಆರ್‌.ವಿ.ದೇವರಾಜ್‌, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು  ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಸಾರ್ವಜನಿಕರು ತಮ್ಮ ವಾರ್ಡ್‌ಗಳ  ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.

ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 22ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ. ಕುಂದುಕೊರತೆಗಳ ಬಗ್ಗೆ ಇ–ಮೇಲ್‌  janaspandana@printersmysore.co.in ಮಾಡಬಹುದು. ಟ್ವಿಟರ್‌ #PVJanaspandana ಮೂಲಕವೂ ಅನಿಸಿಕೆ ಹಂಚಿಕೊಳ್ಳಬಹುದು. ಮಾಹಿತಿಗೆ  9448528998 (ಬೆಳಗ್ಗೆ9 ರಿಂದ ಸಂಜೆ.5ರ ವರೆಗೆ ಕರೆ ಮಾಡಬಹುದು).

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.