ADVERTISEMENT

ಪ್ರಜಾವಾಣಿ, ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ ಇಂದು

​ಪ್ರಜಾವಾಣಿ ವಾರ್ತೆ
Published 21 ಜುಲೈ 2017, 20:05 IST
Last Updated 21 ಜುಲೈ 2017, 20:05 IST
ಪ್ರಜಾವಾಣಿ, ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ ಇಂದು
ಪ್ರಜಾವಾಣಿ, ಡೆಕ್ಕನ್‌ ಹೆರಾಲ್ಡ್‌ ಜನಸ್ಪಂದನ ಇಂದು   

ಬೆಂಗಳೂರು: ಚಿಕ್ಕಪೇಟೆ  ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ (ಜುಲೈ 22) ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಸುಧಾಮನಗರದ ರಾಜಾರಾಮ್‌ ಮೋಹನ್‌ ರಾಯ್‌ ಎಕ್ಸ್‌ಟೆನ್ಷನ್‌ನ ಲಾಲ್‌ಬಾಗ್‌ ಮುಖ್ಯರಸ್ತೆಯಲ್ಲಿರುವ ಹಖ್‌ ಹೌಸ್‌ನಲ್ಲಿ ಅಂದು ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.

ಈ ಕ್ಷೇತ್ರದ ಶಾಸಕ ಆರ್‌.ವಿ. ದೇವರಾಜ್‌, ಕ್ಷೇತ್ರದ ವಿವಿಧ  ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಸಾರ್ವಜನಿಕರು ತಮ್ಮ ವಾರ್ಡ್‌ಗಳ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನಗಳಿಗೆ ಸಂಬಂಧಿಸಿದ ಕುಂದುಕೊರತೆಗಳ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ತನ್ಮೂಲಕ ವಾರ್ಡ್‌ನ ಅಭಿವೃದ್ಧಿಯಲ್ಲಿ ಕೈಜೋಡಿಸಬಹುದು.

ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 22ರಂದು ಬೆಳಿಗ್ಗೆ 9ರಿಂದಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. ಬೆಳಿಗ್ಗೆ 10ರಿಂದ ಪ್ರಶ್ನೆ ಕೇಳಲು ಅವಕಾಶ ಕಲ್ಪಿಸಲಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.