ADVERTISEMENT

ರಾಜಾಜಿನಗರದಲ್ಲಿ ಇಂದು ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2017, 19:30 IST
Last Updated 15 ಡಿಸೆಂಬರ್ 2017, 19:30 IST
ರಾಜಾಜಿನಗರದಲ್ಲಿ ಇಂದು ಜನಸ್ಪಂದನ
ರಾಜಾಜಿನಗರದಲ್ಲಿ ಇಂದು ಜನಸ್ಪಂದನ   

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್‌ಗಳ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಶನಿವಾರ (ಇದೇ 16) ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಏರ್ಪಡಿಸಲಾಗಿದೆ.

ರಾಜಾಜಿನಗರ 2ನೇ ಬ್ಲಾಕ್‌ನ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ (ಆರ್‌ಟಿಒ ಕಚೇರಿ ಹತ್ತಿರ) ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.

ಕ್ಷೇತ್ರದ ಶಾಸಕ ಎಸ್‌.ಸುರೇಶ್‌ ಕುಮಾರ್‌, ಕ್ಷೇತ್ರದ ವಿವಿಧ ವಾರ್ಡ್‌ಗಳ ಪಾಲಿಕೆ ಸದಸ್ಯರು, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಬಯಸುವವರು ಶನಿವಾರ ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು. 10ರಿಂದ ಪ್ರಶ್ನೆ ಕೇಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.