ADVERTISEMENT

ಕರಾವಳಿ ಕ್ರೀಡೆ ಕಂಬಳ ಬೆಂಬಲಿಸಿ ವಿರೇಂದ್ರ ಸೆಹ್ವಾಗ್‌ ಟ್ವೀಟ್‌: ಪರ ವಿರೋಧದ ಚರ್ಚೆ

ಏಜೆನ್ಸೀಸ್
Published 22 ಫೆಬ್ರುವರಿ 2018, 11:18 IST
Last Updated 22 ಫೆಬ್ರುವರಿ 2018, 11:18 IST
ಸಂಗ್ರಹ ಚಿತ್ರ.
ಸಂಗ್ರಹ ಚಿತ್ರ.   

ನವದೆಹಲಿ: ಕರಾವಳಿ ಕ್ರೀಡೆ ಕಂಬಳ ಬೆಂಬಲಿಸಿ ಭಾರತ ಕ್ರಿಕೆಟ್‌ ತಂಡದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌ ಟ್ವೀಟ್‌ ಮಾಡಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

‘ಕಂಬಳಕ್ಕಿದ್ದ ಎಲ್ಲ ಅಡೆತಡೆಗಳು ಈಗ ಪೂರ್ಣಗೊಂಡಿದ್ದು, ಗ್ರಾಮೀಣ ಕ್ರೀಡೆಯನ್ನು ಉಳಿಸಬೇಕಾಗಿದೆ’ ಎಂದು ಸೆಹ್ವಾಗ್‌ ಸೋಮವಾರ ಟ್ವೀಟ್‌ ಮಾಡಿದ್ದರು.

ಟ್ವೀಟ್‌ನಲ್ಲಿ ಏನಿದೆ?
ಕಂಬಳದ ವಿಧೇಯಕಕ್ಕೆ ರಾಷ್ಟ್ರಪತಿಗಳು ಒಪ್ಪಿಗೆ ಸೂಚಿಸಿದ್ದಾರೆ. ಕರ್ನಾಟಕದ ಕಾನೂನು ಬದ್ಧ ಗ್ರಾಮೀಣ ಕ್ರೀಡೆಯಾಗಿದೆ. ಯುವಜನರನ್ನು ಪುನಶ್ಚೇತನಗೊಳಿಸಲು ಇರುವ ಮಾರ್ಗಗಳನ್ನು ತಡೆಯಲು ಕೆಲ ಕಪಟ ಸಂಘಟನೆಗಳ ಪ್ರಯತ್ನಗಳಿಗೆ ಇದೀಗ ತಡೆಯಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

ಕರಾವಳಿ ಜಿಲ್ಲೆಗಳ ಜನಪ್ರಿಯ ಕ್ರೀಡೆಯಾದ ಕಂಬಳಕ್ಕೆ ಅವಕಾಶ ಕಲ್ಪಿಸುವ ಉದ್ದೇಶದಿಂದ ರಾಜ್ಯ ವಿಧಾನಸಭೆಯು ಕಳೆದ ನವೆಂಬರ್‌ 17ರಂದು ಅಂಗೀಕರಿಸಿದ್ದ ಪ್ರಾಣಿ ಹಿಂಸೆ ತಡೆ (ತಿದ್ದುಪಡಿ) ಮಸೂದೆ– 2017ಕ್ಕೆ ರಾಷ್ಟ್ರಪತಿಯವರ ಅಂಕಿತ ದೊರೆತಿದೆ.

ಫೆಬ್ರುವರಿ 10ರಂದು ತಿದ್ದುಪಡಿ ಮಸೂದೆಗೂ ರಾಷ್ಟ್ರಪತಿಯವರು ಅಂಕಿತ ದೊರೆತಿದೆ. ಸೋಮವಾರ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ಕೇಂದ್ರದ ಗೃಹ ಸಚಿವಾಲಯವು ಇದನ್ನು ಖಚಿತಪಡಿಸಿದೆ.

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.