ADVERTISEMENT

‘ಮಹದಾಯಿ ದಾಳ’ ಉರುಳಿಸಿದ ಮೋದಿ ‘ಮಾತುಕತೆ ಮೂಲಕ ಪರಿಹಾರಕ್ಕೆ ಬದ್ಧ’ ಎಂದರು

​ಪ್ರಜಾವಾಣಿ ವಾರ್ತೆ
Published 5 ಮೇ 2018, 10:44 IST
Last Updated 5 ಮೇ 2018, 10:44 IST
‘ಮಹದಾಯಿ ದಾಳ’ ಉರುಳಿಸಿದ ಮೋದಿ ‘ಮಾತುಕತೆ ಮೂಲಕ ಪರಿಹಾರಕ್ಕೆ ಬದ್ಧ’ ಎಂದರು
‘ಮಹದಾಯಿ ದಾಳ’ ಉರುಳಿಸಿದ ಮೋದಿ ‘ಮಾತುಕತೆ ಮೂಲಕ ಪರಿಹಾರಕ್ಕೆ ಬದ್ಧ’ ಎಂದರು   

ಗದಗ: ಮಹದಾಯಿ ವಿಷಯದಲ್ಲಿ ಕಾಂಗ್ರೆಸ್‌ ರಾಜಕೀಯ ಮಾಡಿದೆ ಎಂದು ವಾಗ್ದಾಳಿ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಮಹದಾಯಿ ವಿಚಾರವನ್ನು ನಾವು ಮಾತುಕತೆ ಮೂಲಕ ಪರಿಹರಿಸಲು ಬದ್ಧರಾಗಿದ್ದೇವೆ ಎಂದು ಹೇಳಿ ‘ಮಹದಾಯಿ ದಾಳ’ ಉರುಳಿಸಿದರು.

ಗದಗಿನ ತೋಂಟದಾರ್ಯ ಎಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಶನಿವಾರ ನಡೆದ ಬಿಜೆಪಿಯ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಅವರು ಮಾತನಾಡಿದರು.

ಕೆರೆಗಳನ್ನು ಹೂಳೆತ್ತುವ ಪ್ರಯತ್ನವನ್ನು ಕಾಂಗ್ರೆಸ್‌ ಸರ್ಕಾರ ಮಾಡಿಲ್ಲ. ಕೆರೆ ಬರಿದಾಗುವುದನ್ನೇ ಅವರು ಕಾಯುತ್ತಿದ್ದಾರೆ, ಬ್ಯುಲ್ಡರ್‌ಗಳಿಗೆ ಮಾರಾಟ ಮಾಡಲು ಹೊರಟ್ಟಿದ್ದಾರೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಜನರ ಕಣ್ಣಿಗೆ ಮಣ್ಣೆರಚುವುದರಲ್ಲಿ ನಿಸ್ಸೀಮರು. ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ಮಾಡುತ್ತಿರುವ ರಾಜಕಾರಣವೇ ಇದಕ್ಕೆ ಉದಾಹರಣೆ ಎಂದು ಮೋದಿ ಟೀಕಿಸಿದರು.

ADVERTISEMENT

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್‌ ಏನೇನು ಮಾಡಿದೆ ಎಂಬುದನ್ನು ನಾನು ನಿಮ್ಮ ಮುಂದೆ ತೆರೆದಿಡುತ್ತೇನೆ. 2007ರಲ್ಲಿ ಗೋವಾ ಚುನಾವಣೆ ಸಂದರ್ಭ ಸೋನಿಯಾ ಗಾಂಧಿ ಅವರು ಏನು ಹೇಳಿದ್ದರು ಎಂಬುದು ಇಲ್ಲಿನ ಮುಖ್ಯಮಂತ್ರಿಗೆ ಗೊತ್ತಿಲ್ಲ. ಯಾಕೆಂದರೆ ಅವರು ಆಗ ಬೇರೆ ಪಕ್ಷದಲ್ಲಿದ್ದರು. ಆಗ ಮುಖ್ಯಮಂತ್ರಿಯೂ ಆಗಿರಲಿಲ್ಲ ಎಂದು ಹಿಂದಿನ ಸಂಗತಿಗಳನ್ನು ಮೆಲುಕು ಹಾಕಿದರು.

ಮುಖ್ಯಮಂತ್ರಿಗಳೇ, ಇಲ್ಲಿನ ರೈತರನ್ನು ಹಾದಿತಪ್ಪಿಸುವ ಬದಲು ಮಹದಾಯಿ ವಿಚಾರವಾಗಿ ನಿಮ್ಮ ನಿಲುವೇನು ಎಂಬುದನ್ನು ಸೋನಿಯಾ ಗಾಂಧಿಯವರ ಜತೆ ಮಾತನಾಡಿ ಸ್ಪಷ್ಟಪಡಿಸಿ. ಮಹದಾಯಿಯ ಒಂದೇ ಒಂದು ಹನಿಯನ್ನು ಕರ್ನಾಟಕಕ್ಕೆ ನೀಡಲಾಗದು ಎಂದು ಸೋನಿಯಾ 2007ರಲ್ಲಿ ಹೇಳಿದ್ದರು. ಕರ್ನಾಟಕದ ರೈತರ, ಯುವಕರ ಹಾದಿತಪ್ಪಿಸಬೇಡಿ ಎಂದು ಮೋದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.