ADVERTISEMENT

PHOTOS: ರಾಜ್ಯದಾದ್ಯಂತ 76ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವನ್ನು ರಾಜ್ಯದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ.ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಇತ್ತ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2022, 6:28 IST
Last Updated 15 ಆಗಸ್ಟ್ 2022, 6:28 IST
ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.
ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದರು.   
ಜಾಗದ ಒಡೆತನ ವಿಚಾರವಾಗಿ ಹೆಚ್ಚು ಸುದ್ದಿಯಾಗಿದ್ದ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸೋಮವಾರ ಬೆಳಿಗ್ಗೆ ಧ್ವಜಾರೋಹಣ ನೆರವೇರಿತು.
ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.
ವಿಜಯನಗರದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಧ್ವಜಸ್ತಂಭ ಉದ್ಘಾಟಿಸಿದರು.
ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ‌ ಪೂಜಾರಿ ಗೌರವ ವಂದನೆ ಸ್ವೀಕರಿಸಿದರು.
ಚಿತ್ರದುರ್ಗದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ ಧ್ವಜಾರೋಹಣ ನೆರವೇರಿಸಿದರು.
ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬ.ಪಾಟೀಲ ಮುನೇನಕೊಪ್ಪ ಅವರು ಧ್ವಜಾರೋಹಣ ನೆರವೇರಿಸಿದರು.
ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ‌ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಧ್ವಜಾರೋಹಣ ನೆರವೇರಿಸಿದರು.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.
ಮಂಗಳೂರು ನಗರದ ನೆಹರು ಮೈದಾನದಲ್ಲಿ ಸಚಿವ ವಿ.ಸುನಿಲ್ ಕುಮಾರ್ ಅವರು ಧ್ವಜಾರೋಹಣ ನೆರವೇರಿಸಿದರು.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಧ್ವಜಾರೋಹಣ ನೆರವೇರಿಸಿದರು.
ಹುಬ್ಬಳ್ಳಿಯ ಮಹಾನಗರ ಪಾಲಿಕೆ ಆವರಣದಲ್ಲಿ ಸ್ಥಾಪಿಸಲಾದ 75 ಅಡಿ ಎತ್ತರದ ಧ್ವಜಸ್ತಂಭವನ್ನು ಶಾಸಕ ಜಗದೀಶ ಶೆಟ್ಟರ್ ಉದ್ಘಾಟಿಸಿದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ‌.ಸಿ.ನಾಗೇಶ್ ಅವರು ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಮಾಡಿದರು.
ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಧ್ವಜಾರೋಹಣ ನೆರವೇರಿಸಿದರು.
ದೇಶದಲ್ಲೇ ಅತಿ ದೊಡ್ಡದು ಎನ್ನಲಾದ ತ್ರಿವರ್ಣ ಧ್ವಜವನ್ನು ಕೋಲಾರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಪ್ರದರ್ಶಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.