ADVERTISEMENT

6ಕ್ಕೆ ‘ಪ್ರಜಾವಾಣಿ’ ಜನಸ್ಪಂದನ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2019, 7:17 IST
Last Updated 14 ಅಕ್ಟೋಬರ್ 2019, 7:17 IST
   

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ನಿವಾಸಿಗಳೇ, ನಿಮ್ಮ ಬಡಾವಣೆಯಲ್ಲಿ ಬೀದಿ ದೀಪಗಳು ಬೆಳಗುವುದಿಲ್ಲವೇ? ನೀರು ಪೂರೈಕೆ ಅಸಮರ್ಪಕವಾಗಿದೆಯೇ? ಕಸ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲವೇ?

ಹಾಗಾದರೆ, ಅಕ್ಟೋಬರ್‌ 6ರಂದು ಬೆಳಿಗ್ಗೆಮತ್ತಿಕೆರೆಯ ಜೆ.ಪಿ.ಪಾರ್ಕ್‌ಗೆ ಬನ್ನಿ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ‘ಪ್ರಜಾವಾಣಿ’ ಮತ್ತು ‘ಡೆಕ್ಕನ್‌ ಹೆರಾಲ್ಡ್‌’ ಪತ್ರಿಕೆಗಳ ಆಶ್ರಯದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ.

ನಿಮ್ಮ ದೂರುಗಳನ್ನು ನೇರವಾಗಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಹೇಳಿಕೊಂಡು ಸ್ಥಳದಲ್ಲೇ ಪರಿಹಾರ ಪಡೆಯಬಹುದು.

ADVERTISEMENT

ಕ್ಷೇತ್ರದ ಶಾಸಕರು, ವಾರ್ಡ್‌ಗಳ ಪಾಲಿಕೆ ಸದಸ್ಯರು, ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಕ್ಷೇತ್ರದ ಕುಂದುಕೊರತೆಗಳ ಬಗ್ಗೆ ಗಮನಸೆಳೆದು ಸ್ಥಳದಲ್ಲೇ ಪರಿಹಾರ ಪಡೆಯಲು ಸ್ಥಳೀಯರು ಈ ಅವಕಾಶ ಬಳಸಿಕೊಳ್ಳಬಹುದು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅ.6ರಂದು ಬೆಳಿಗ್ಗೆ 9ರಿಂದ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದು.

ಕುಂದು ಕೊರತೆಗಳನ್ನು ಮುಂಚಿತವಾಗಿ janaspandana@printersmysore.co.inಗೆ ಇ–ಮೇಲ್‌ ಕೂಡ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.