ADVERTISEMENT

ಕ್ರಿಕೆಟಿಗ ಆರ್‌.ಪಿ.ಸಿಂಗ್‌ಗೆ ಪಿತೃವಿಯೋಗ

ಪಿಟಿಐ
Published 12 ಮೇ 2021, 14:30 IST
Last Updated 12 ಮೇ 2021, 14:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರುದ್ರ ಪ್ರತಾಪ್ ಸಿಂಗ್ ಅವರ ತಂದೆ ಶಿವಪ್ರಸಾದ್ ಸಿಂಗ್ ಅವರು ಕೋವಿಡ್‌ನಿಂದಾಗಿ ಬುಧವಾರ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಎಡಗೈ ವೇಗಿ, 35 ವರ್ಷದ ರುದ್ರ ಪ್ರತಾಪ್ ಸಿಂಗ್‌ (ಆರ್.ಪಿ.ಸಿಂಗ್) ಅವರು ಟ್ವಿಟರ್‌ ಮೂಲಕಈ ವಿಷಯವನ್ನು ತಿಳಿಸಿದ್ದಾರೆ.

‘ನನ್ನ ತಂದೆ ಶಿವಪ್ರಸಾದ್ ಸಿಂಗ್ ನಿಧನದ ಸುದ್ದಿ ತಿಳಿಸಲು ತುಂಬ ದುಃಖವೆನಿಸುತ್ತಿದೆ. ಕೋವಿಡ್‌ನಿಂದ ಬಳಲುತ್ತಿದ್ದ ಅವರು ಬುಧವಾರ ಕೊನೆಯುಸಿರೆಳೆದರು. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಅಪ್ಪಾ‘ ಎಂದು ಸಿಂಗ್ ಟ್ವೀಟ್‌ ಮಾಡಿದ್ದಾರೆ.

ADVERTISEMENT

ಆರ್‌.ಪಿ.ಸಿಂಗ್ ಅವರು ಭಾರತ ತಂಡದ ಪರ 14 ಟೆಸ್ಟ್, 58 ಏಕದಿನ ಹಾಗೂ 10 ಟ್ವೆಂಟಿ 20 ಪಂದ್ಯಗಳನ್ನು ಆಡಿದ್ದಾರೆ. 2018ರ ಸೆಪ್ಟೆಂಬರ್‌ನಲ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.