ADVERTISEMENT

ಪಾಕಿಸ್ತಾನಕ್ಕೆ ಹೋಗುವುದಾಗಿ ಗೇಲ್ ಟ್ವೀಟ್; ಗೊಂದಲದಲ್ಲಿ ಅಭಿಮಾನಿಗಳು!

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಸೆಪ್ಟೆಂಬರ್ 2021, 12:30 IST
Last Updated 19 ಸೆಪ್ಟೆಂಬರ್ 2021, 12:30 IST
ಕ್ರಿಸ್ ಗೇಲ್
ಕ್ರಿಸ್ ಗೇಲ್   

ದುಬೈ: ಭದ್ರತಾ ಕಾರಣಗಳನ್ನು ಒಡ್ಡಿರುವ ನ್ಯೂಜಿಲೆಂಡ್, ಪಾಕಿಸ್ತಾನ ಪ್ರವಾಸವನ್ನು ಏಕಾಏಕಿ ಮೊಟಕುಗೊಳಿಸಿ ತವರಿಗೆ ಮರಳಿದೆ. ಕೊನೆಯ ಕ್ಷಣದಲ್ಲಿ ನ್ಯೂಜಿಲೆಂಡ್ ತಂಡವು ಪ್ರವಾಸವನ್ನು ಮೊಟಕುಗೊಳಿಸಿರುವುದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಏತನ್ಮಧ್ಯೆ ವೆಸ್ಟ್‌ಇಂಡೀಸ್‌ನಸ್ಟಾರ್ ಆಟಗಾರ ಕ್ರಿಸ್ ಗೇಲ್ ತಾವು ಪಾಕಿಸ್ತಾನಕ್ಕೆ ಹೋಗುವುದಾಗಿ ಟ್ವೀಟ್ ಮಾಡಿರುವುದು ಗೊಂದಲಕ್ಕೆ ಕಾರಣವಾಗಿದೆ.

'ನಾನು ನಾಳೆ ಪಾಕಿಸ್ತಾನಕ್ಕೆ ಹೋಗುತ್ತಿದ್ದೇನೆ. ನನ್ನೊಂದಿಗೆ ಯಾರೆಲ್ಲ ಬರುತ್ತೀರಿ?' ಎಂದು ಟ್ವೀಟ್ ಮಾಡಿದ್ದಾರೆ.

ಗೇಲ್ ಟ್ಟೀಟ್ ಅನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಹಂಚಿದೆ. ಈ ನಡುವೆ ಅಭಿಮಾನಿಗಳಲ್ಲಿ ಗೊಂದಲಕ್ಕೆ ಕಾರಣವಾಗಿದ್ದು, ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಗೇಲ್ ಟ್ವೀಟ್ ಕೊನೆಗೆ ಕಣ್ಸನ್ನೆ ಮಾಡುವ ಇಮೋಜಿ ಸಹ ಹಂಚಿದ್ದಾರೆ.

ಅಂದ ಹಾಗೆ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (ಐಪಿಎಲ್) ಪಂಜಾಬ್ ಕಿಂಗ್ಸ್ ತಂಡವನ್ನು ಗೇಲ್ ಪ್ರತಿನಿಧಿಸುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.