ADVERTISEMENT

ಐಸಿಸಿ ಟಿ20 ರ‍್ಯಾಂಕಿಂಗ್‌: ನಾಲ್ಕನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಸ್ಥಿರ

ಪಿಟಿಐ
Published 15 ಸೆಪ್ಟೆಂಬರ್ 2021, 11:18 IST
Last Updated 15 ಸೆಪ್ಟೆಂಬರ್ 2021, 11:18 IST
ಕೆ.ಎಲ್‌.ರಾಹುಲ್ (ಎಡ) ಹಾಗೂ ವಿರಾಟ್‌ ಕೊಹ್ಲಿ– ಎಎಫ್‌ಪಿ ಚಿತ್ರ
ಕೆ.ಎಲ್‌.ರಾಹುಲ್ (ಎಡ) ಹಾಗೂ ವಿರಾಟ್‌ ಕೊಹ್ಲಿ– ಎಎಫ್‌ಪಿ ಚಿತ್ರ   

ದುಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಕೆ.ಎಲ್.ರಾಹುಲ್ ಅವರು ಐಸಿಸಿ ಟಿ20 ಬ್ಯಾಟ್ಸ್‌ಮನ್‌ಗಳ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ನಾಲ್ಕು ಮತ್ತು ಆರನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆದರೆ ಭಾರತದ ಯಾವುದೇ ಬೌಲರ್‌ ಅಗ್ರ 10ರಲ್ಲಿ ಸ್ಥಾನ ಪಡೆದಿಲ್ಲ.

ಬ್ಯಾಟ್ಸ್‌ಮನ್‌ಗಳ ವಿಭಾಗದ ಅಗ್ರ ಏಳು ಸ್ಥಾನಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಇಂಗ್ಲೆಂಡ್‌ನ ಡೇವಿಡ್‌ ಮಲಾನ್‌ ಮೊದಲನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ದಕ್ಷಿಣ ಆಫ್ರಿಕಾದ ವಿಕೆಟ್‌ ಕೀಪರ್ ಬ್ಯಾಟ್ಸ್‌ಮನ್‌ ಕ್ವಿಂಟನ್ ಡಿಕಾಕ್‌ ಎಂಟನೇ ಸ್ಥಾನದಲ್ಲಿದ್ದರೆ, ವೆಸ್ಟ್ ಇಂಡೀಸ್‌ನ ಎವಿನ್ ಲೂಯಿಸ್‌ ಒಂದು ಸ್ಥಾನ ಕುಸಿದು ಒಂಬತ್ತನೇ ಸ್ಥಾನದಲ್ಲಿದ್ದಾರೆ.

ಬೌಲರ್‌ಗಳ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ತಬ್ರೇಜ್ ಶಂಸಿ ಅಗ್ರಸ್ಥಾನದಲ್ಲಿದ್ದರೆ, ಶ್ರೀಲಂಕಾದ ವನಿಂದು ಹಸರಂಗ ಮತ್ತು ಅಫ್ಗಾನಿಸ್ತಾನದ ರಶೀದ್ ಖಾನ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿದ್ದಾರೆ.

ADVERTISEMENT

ಭಾರತದ ವೇಗಿ ಭುವನೇಶ್ವರ್ ಕುಮಾರ್‌ 12ನೇ ಮತ್ತು ಆಫ್‌ಸ್ಪಿನ್ನರ್‌ ವಾಷಿಂಗ್ಟನ್ ಸುಂದರ್‌ 18ನೇ ಸ್ಥಾನದಲ್ಲಿದ್ದಾರೆ. ಯಜುವೇಂದ್ರ ಚಾಹಲ್ 25ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಆಲ್‌ರೌಂಡರ್‌ಗಳ ವಿಭಾಗದಲ್ಲಿ ಹಾರ್ದಿಕ್ ಪಾಂಡ್ಯ 20ನೇ ಸ್ಥಾನದಲ್ಲಿದ್ದಾರೆ. ಈ ವಿಭಾಗದ ಮೊದಲ ಸ್ಥಾನವು ಅಫ್ಗಾನಿಸ್ತಾನದ ಮೊಹಮ್ಮದ್ ನಬಿ ಅವರ ಬಳಿಯಿದೆ. ಬಾಂಗ್ಲಾದೇಶದ ಶಕೀಬ್‌ ಅಲ್‌ ಹಸನ್‌ ಅವರು ನಬಿ ನಂತರದ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.