ADVERTISEMENT

ನ್ಯೂಜಿಲೆಂಡ್‌ ನಿರ್ಧಾರದಿಂದ ಪಾಕ್‌ ಕ್ರಿಕೆಟ್‌ಗೆ ಅವಮಾನ: ಇಂಗ್ಲೆಂಡ್‌ ಮಾಜಿ ನಾಯಕ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 8:44 IST
Last Updated 18 ಸೆಪ್ಟೆಂಬರ್ 2021, 8:44 IST
ಮೈಕೆಲ್‌ ವಾನ್‌
ಮೈಕೆಲ್‌ ವಾನ್‌   

ಲಂಡನ್‌: ನ್ಯೂಜಿಲೆಂಡ್‌ ನಿರ್ಧಾರದಿಂದ ಪಾಕಿಸ್ತಾನ ಕ್ರಿಕೆಟ್‌ಗೆ ಅವಮಾನವಾಗಿದೆ ಎಂದು ಇಂಗ್ಲೆಂಡ್‌ ತಂಡದ ಮಾಜಿ ನಾಯಕ ಮೈಕೆಲ್‌ ವಾನ್‌ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 'ಪಾಕಿಸ್ತಾನ ಕ್ರಿಕೆಟ್‌ಗೆ ಇದು ಅವಮಾನದ ಸಂಗತಿಯಾಗಿದೆ. ಇಂತಹ ತಡವಾದ ನಿರ್ಧಾರಗಳು ಆಟವನ್ನು ಆರ್ಥಿಕವಾಗಿ ದೊಡ್ಡ ಮಟ್ಟದಲ್ಲಿ ಹಾಳು ಮಾಡುತ್ತವೆ. ಪಾಕಿಸ್ತಾನದಲ್ಲಿ ಮತ್ತೊಮ್ಮೆ ಕ್ರಿಕೆಟ್‌ ಆಡಬೇಕು. ಅಲ್ಲಿನ ಭದ್ರತಾ ಸಮಸ್ಯೆಗಳಿಗೆ ಪರಿಹಾರ ಸಿಗಬಹುದು ಎಂಬುದಾಗಿ ಆಶಿಸುತ್ತೇವೆ' ಎಂದು ಮೈಕೆಲ್‌ ವಾನ್‌ ತಿಳಿಸಿದ್ದಾರೆ.

ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಶುಕ್ರವಾರ ಮೊದಲ ಏಕದಿನ ಪಂದ್ಯ ನಿಗದಿಯಾಗಿತ್ತು. ಆದರೆ, ಈ ಪ್ರವಾಸವನ್ನು ಮೊಟಕುಗೊಳಿಸಲು ನ್ಯೂಜಿಲೆಂಡ್‌ ತಂಡವು ಶುಕ್ರವಾರ ನಿರ್ಧಾರ ತೆಗೆದುಕೊಂಡಿದೆ.

ADVERTISEMENT

ಮಾಜಿ ವೇಗಿ ಶೋಯಬ್‌ ಅಖ್ತರ್‌, ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್ ಆಜಂ ಹಾಗೂ ಪಾಕಿಸ್ತಾನ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಸೇರಿದಂತೆ ಹಲವು ಕ್ರಿಕೆಟಿಗರು ನ್ಯೂಜಿಲೆಂಡ್‌ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.