ADVERTISEMENT

Paralympics: ಜಾವೆಲಿನ್‌ನಲ್ಲಿ ಚಿನ್ನ ಗೆದ್ದ ಸುಮಿತ್‌ಗೆ ಪ್ರಧಾನಿ ಅಭಿನಂದನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಆಗಸ್ಟ್ 2021, 14:00 IST
Last Updated 30 ಆಗಸ್ಟ್ 2021, 14:00 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಟೋಕಿಯೊ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ವಿಭಾಗದಲ್ಲಿ ಚಿನ್ನ ಗೆದ್ದು ವಿಶ್ವದಾಖಲೆ ನಿರ್ಮಿಸಿರುವ ಭಾರತದ ಸುಮಿತ್‌ ಅಂತಿಲ್‌ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, 'ನಮ್ಮ ಕ್ರೀಡಾಪಟುಗಳು ಪ್ಯಾರಾಲಿಂಪಿಕ್ಸ್‌ನಲ್ಲಿ ಮಿಂಚುತ್ತಲೇ ಇದ್ದಾರೆ. ಪ್ಯಾರಾಲಿಂಪಿಕ್ಸ್‌ನಲ್ಲಿ ಸುಮಿತ್‌ ಅಂತಿಲ್‌ ಅವರು ನಿರ್ಮಿಸಿದ ದಾಖಲೆಗೆ ರಾಷ್ಟ್ರವೇ ಹೆಮ್ಮೆಪಡುತ್ತಿದೆ' ಎಂದು ತಿಳಿಸಿದ್ದಾರೆ.

'ಪ್ರತಿಷ್ಠಿತ ಚಿನ್ನದ ಪದಕ ಗೆದ್ದ ಸುಮಿತ್ ಅವರಿಗೆ ಅಭಿನಂದನೆಗಳು' ಎಂದು ಪ್ರಧಾನಿ ಮೋದಿ ಶುಭ ಹಾರೈಸಿದ್ದಾರೆ.

ADVERTISEMENT

ಜಪಾನ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಜಾವೆಲಿನ್‌ ಥ್ರೋ ಸ್ಪರ್ಧೆಯಲ್ಲಿ ಭಾರತದ ಸುಮಿತ್‌ ಅಂತಿಲ್‌ ಅವರು ವಿಶ್ವದಾಖಲೆಯೊಂದಿಗೆ ಚಿನ್ನ ಗೆದ್ದುಕೊಂಡಿದ್ದಾರೆ.

23 ವರ್ಷದ ಸುಮಿತ್‌ ಹರಿಯಾಣದ ಸೋನಿಪತ್‌ನವರು. 2015ರಲ್ಲಿ ಸಂಭವಿಸಿದ ಮೋಟರ್‌ಬೈಕ್‌ ಅಪಘಾತದಲ್ಲಿ ಎಡಗಾಲು ಕಳೆದುಕೊಂಡಿದ್ದರು. ಅವರು ತಮ್ಮ ಐದನೇ ಪ್ರಯತ್ನದಲ್ಲಿ ಬರೋಬ್ಬರಿ 68.55 ಮೀಟರ್‌ ದೂರ ಜಾವೆಲಿನ್‌ ಎಸೆದು ತಮ್ಮದೇ ಹೆಸರಿನಲ್ಲಿದ್ದ ವಿಶ್ವದಾಖಲೆಯನ್ನು ಮುರಿದಿದ್ದಾರೆ. ಈ ಹಿಂದೆ ಅವರು 62.88 ಮೀಟರ್‌ ದೂರ ಜಾವೆಲಿನ್ ಎಸೆದು ದಾಖಲೆ ನಿರ್ಮಿಸಿದ್ದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.