ADVERTISEMENT

Tokyo Paralympics: ಹೈಜಂಪ್‌ನಲ್ಲಿ ಬೆಳ್ಳಿ ಗೆದ್ದ 18 ವರ್ಷದ ಪ್ರವೀಣ್ ಕುಮಾರ್

ಪಿಟಿಐ
Published 3 ಸೆಪ್ಟೆಂಬರ್ 2021, 3:52 IST
Last Updated 3 ಸೆಪ್ಟೆಂಬರ್ 2021, 3:52 IST
ಪ್ರವೀಣ್ ಕುಮಾರ್
ಪ್ರವೀಣ್ ಕುಮಾರ್   

ಟೋಕಿಯೊ: ಜಪಾನ್‌ನಲ್ಲಿ ಸಾಗುತ್ತಿರುವ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ.

ಇದರೊಂದಿಗೆ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಇದೇ ಮೊದಲ ಬಾರಿಗೆ ಪ್ಯಾರಾಲಿಂಪಿಕ್ಸ್‌ನಲ್ಲಿ ಸ್ಪರ್ಧಿಸುತ್ತಿರುವ 18 ವರ್ಷದ ಪ್ರವೀಣ್ ಕುಮಾರ್, 2.07 ಮೀಟರ್ ಎತ್ತರಕ್ಕೆ ಜಿಗಿದು ನೂತನ ಏಷ್ಯಾ ದಾಖಲೆ ಬರೆದರು.

ಈ ವಿಭಾಗದಲ್ಲಿ 2.10 ಮೀಟರ್ ಜಿಗಿದ ಬ್ರಿಟನ್‌ನ ಜೊನಾಥನ್ ಬ್ರೂಮ್ ಎಡ್ವರ್ಡ್ಸ್ ಚಿನ್ನದ ಪದಕಕ್ಕೆ ಕೊರಳೊಡ್ಡಿದರು. ರಿಯೋ ಪ್ಯಾರಾಲಿಂಪಿಕ್ಸ್ ಚಾಂಪಿಯನ್ ಪೊಲೆಂಡ್‌ನ ಮ್ಯಾಸೀಜ್ ಲೆಪಿಯಾಟೊ (2.04 ಮೀಟರ್) ಕಂಚಿನ ಪದಕ ಗೆದ್ದರು.

ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತ ಇದುವರೆಗೆ ಎರಡು ಚಿನ್ನ, ಆರು ಬೆಳ್ಳಿ ಹಾಗೂ ಮೂರು ಕಂಚಿನ ಪದಕಗಳನ್ನು ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ:

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.