ADVERTISEMENT

Thomas Cup: ಐತಿಹಾಸಿಕ ಗೆಲುವು, ಇತಿಹಾಸ ನಿರ್ಮಿಸಿದ ಭಾರತ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 15 ಮೇ 2022, 11:04 IST
Last Updated 15 ಮೇ 2022, 11:04 IST
ಭಾರತ ಚಾಂಪಿಯನ್
ಭಾರತ ಚಾಂಪಿಯನ್   

ಬ್ಯಾಂಕಾಕ್: ಫೈನಲ್‌ನಲ್ಲಿ ಬಲಿಷ್ಠ ಇಂಡೋನೇಷ್ಯಾ ವಿರುದ್ಧ ಅಮೋಘ ಗೆಲುವು ದಾಖಲಿಸಿರುವ ಭಾರತ ತಂಡ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚೊಚ್ಚಲ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಮೂಲಕ ಬ್ಯಾಡ್ಮಿಂಟನ್ ಇತಿಹಾಸದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

ಭಾನುವಾರ ನಡೆದ ಫೈನಲ್‌ನಲ್ಲಿ ಭಾರತವು ಹಾಲಿ ಚಾಂಪಿಯನ್ ಇಂಡೋನೇಷ್ಯಾ ವಿರುದ್ಧ 3-0 ಅಂತರದ ಭರ್ಜರಿ ಗೆಲುವು ದಾಖಲಿಸಿತು.

ADVERTISEMENT

ಐತಿಹಾಸಿಕ ಸಾಧನೆ ಮಾಡಿರುವ ಭಾರತ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.

ಥಾಮಸ್ ಕಪ್‌ನಲ್ಲಿ ಬಲಿಷ್ಠ ತಂಡ ಇಂಡೋನೇಷ್ಯಾ ಒಟ್ಟು 14 ಬಾರಿ ಪ್ರಶಸ್ತಿ ಜಯಿಸಿದೆ.

ಸಿಂಗಲ್ಸ್‌ನಲ್ಲಿ ಲಕ್ಷ್ಮಸೇನ್ ಇಂಡೋನೇಷ್ಯಾದ ಆಂಥೋನಿ ಗಿಂಟಿಂಗ್ ವಿರುದ್ಧ ಗೆಲುವು ದಾಖಲಿಸಿ ಮಹತ್ವದ 1-0 ಮುನ್ನಡೆ ಗಳಿಸಿದರು.

ಬಳಿಕ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗೆ ಶೆಟ್ಟಿ ಜೋಡಿ ಗೆದ್ದು ಸಂಭ್ರಮಿಸಿದರು.

ಕೊನೆಯಲ್ಲಿ ಕಿದಂಬಿ ಶ್ರೀಕಾಂತ್, ಗೆಲುವು ದಾಖಲಿಸುವದರೊಂದಿಗೆ ಭಾರತಕ್ಕೆ ಐತಿಹಾಸಿಕ ಜಯ ತಂದುಕೊಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.