ADVERTISEMENT

ಒಡಿಶಾ, ಪಶ್ಚಿಮ ಬಂಗಾಳಕ್ಕೆ ಚಂಡಮಾರುತ ಸಾಧ್ಯತೆ: ನೆರವಿಗೆ ಸೂಚನೆ

ಪಿಟಿಐ
Published 16 ಮೇ 2020, 20:00 IST
Last Updated 16 ಮೇ 2020, 20:00 IST
ಕಳೆದ ವರ್ಷ ಮೇ ತಿಂಗಳಲ್ಲಿ ಫನಿ ಚಂಡಮಾರುತ ಒಡಿಶಾದ ಪುರಿಯಲ್ಲಿ ಸೃಷ್ಟಿಸಿದ್ದ ಅವಾಂತರ 
ಕಳೆದ ವರ್ಷ ಮೇ ತಿಂಗಳಲ್ಲಿ ಫನಿ ಚಂಡಮಾರುತ ಒಡಿಶಾದ ಪುರಿಯಲ್ಲಿ ಸೃಷ್ಟಿಸಿದ್ದ ಅವಾಂತರ    

ನವದೆಹಲಿ: ಬಂಗಾಳದ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಭಾನುವಾರ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಂಭಾವ್ಯ ಚಂಡಮಾರುತ ಎದುರಿಸಲು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಸಿದ್ಧತೆಯನ್ನು ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್‌ಸಿಎಂಸಿ)ಪರಿಶೀಲಿಸಿದೆ.

ಕೇಂದ್ರ ಸಂಪುಟದ ಕಾರ್ಯದರ್ಶಿ ರಾಜೀವ್‌ ಗೌಬಾ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಎನ್‌ಸಿಎಂಸಿ ಸಭೆ ನಡೆಯಿತು.

ADVERTISEMENT

ಪ್ರಸ್ತುತ ಪರಿಸ್ಥಿತಿ ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಸಿದ್ಧತೆಯ ಕುರಿತು ಮಾಹಿತಿ ಪಡೆದರಾಜೀವ್‌ ಗೌಬಾ ಅವರು, ತಕ್ಷಣದ ಸಹಾಯವನ್ನು ಒದಗಿಸುವಂತೆ ನಿರ್ದೇಶಿಸಿದರು.

ಭಾರಿ ಮಳೆ, ಗಾಳಿಯ ಜೊತೆಗೆ ಅಲೆಗಳ ಅಬ್ಬರ ತೀವ್ರವಾಗುವ ನಿರೀಕ್ಷೆಯಿದೆ.ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.