ADVERTISEMENT

ಜೆಇಇ, ನೀಟ್‌ ದಿನಾಂಕ ನಾಳೆ ಪ್ರಕಟ: ಎಚ್‌ಆರ್‌ಡಿ

ಪಿಟಿಐ
Published 4 ಮೇ 2020, 2:05 IST
Last Updated 4 ಮೇ 2020, 2:05 IST
   

ನವದೆಹಲಿ: ‘ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್‌ ಪ್ರವೇಶಕ್ಕಾಗಿ ನಡೆಯುವ ಜಂಟಿ ಪ್ರವೇಶ ಪರೀಕ್ಷೆ (ಜೆಇಇ) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ಎನ್‌ಇಇಟಿ) ದಿನಾಂಕವನ್ನು ಮೇ 5ರಂದು ಘೋಷಿಸಲಾಗುವುದು’ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.

‘ಎಚ್‌ಆರ್‌ಡಿ ಸಚಿವ ರಮೇಶ್ ಪೋಖ್ರಿಯಾಲ್‌ ನಿಶಾಂಕ್ ಅವರುಪರೀಕ್ಷಾ ದಿನಾಂಕವನ್ನು ಘೋಷಿಸಲಿದ್ದಾರೆ. ಅದೇ ದಿನ ವಿದ್ಯಾರ್ಥಿಗಳೊಂದಿಗೆ ಸಚಿವರು ಆನ್‌ಲೈನ್‌ ಸಂವಾದ ನಡೆಸಲಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಗೊಂದಲಪರಿಹಾರವಾಗಲಿದೆ’ ಎಂದಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.