ADVERTISEMENT

ಕೊರೊನಾ ಸೋಂಕು ಭೀತಿ: ಐಸಿಎಸ್‌ಇ 10, 12ನೇ ತರಗತಿಗಳ ಪರೀಕ್ಷೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2020, 6:47 IST
Last Updated 19 ಮಾರ್ಚ್ 2020, 6:47 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಕೊರೊನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಿಐಎಸ್‌ಸಿಇಯು 2019–20ನೇ ಸಾಲಿನ 10ನೇ (ಐಸಿಎಸ್‌ಇ) ಮತ್ತು 12ನೇ(ಐಎಸ್‌ಸಿ)ತರಗತಿಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.

ಕೌನ್ಸಿಲ್‌ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಕ್ಸಾಮಿನೇಷನ್ಸ್‌ನ (ಸಿಐಎಸ್‌ಸಿಇ) ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೆರ್ರಿ ಅರಾಥೂನ್‌ ಮಾತನಾಡಿ, ‘ಮಾರ್ಚ್‌ 19ರಿಂದ 30ರ ವರೆಗೆನಡೆಯಬೇಕಿದ್ದ ಪರೀಕ್ಷೆಗಳನ್ನುಮುನ್ನೆಚ್ಚರಿಕೆ ಕ್ರಮವಾಗಿ ಮುಂದೂಡಲಾಗಿದೆ’ ಎಂದು ತಿಳಿಸಿದ್ದಾರೆ.

ಹೊಸ ವೇಳಾಪಟ್ಟಿ ಪ್ರಕಟವಾದ ಬಳಿಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಈಗಾಗಲೇ ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮಾರ್ಚ್‌ 31ರ ವರೆಗೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.