ADVERTISEMENT

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ: ಶೀಘ್ರ ನಿರ್ಧಾರ

ಪಿಟಿಐ
Published 17 ಜೂನ್ 2020, 14:18 IST
Last Updated 17 ಜೂನ್ 2020, 14:18 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಸಿಬಿಎಸ್‌ಇ 12ನೇ ತರಗತಿಯ ಬಾಕಿ ಉಳಿದಿರುವ ವಿಷಯಗಳ ಪರೀಕ್ಷೆಗಳನ್ನು ನಡೆಸಬೇಕೇ, ಬೇಡವೇ ಎನ್ನುವುದರ ಕುರಿತು ಶೀಘ್ರದಲ್ಲೇ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಹಿಂದೆ ಜುಲೈ 1ರಿಂದ ಜುಲೈ 15ರವರೆಗೆ ಪರೀಕ್ಷೆ ನಡೆಸುವುದಾಗಿ ಸಿಬಿಎಸ್‌ಇ ಘೋಷಿಸಿತ್ತು. ದೇಶದಲ್ಲಿ ಕೋವಿಡ್‌–19 ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣದಿಂದ ಪರೀಕ್ಷೆಗಳನ್ನು ರದ್ದುಗೊಳಿಸಲು ಕೋರಿ ಪೋಷಕರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ.ಖಾನ್‌ವಿಲ್ಕರ್‌ ಅವರಿದ್ದ ನ್ಯಾಯಪೀಠವು ವಿಡಿಯೊ ಕಾನ್ಫರೆನ್ಸ್‌ ಮೂಲಕ ಬುಧವಾರ ಕೈಗೆತ್ತಿಕೊಂಡಿತ್ತು. ಈ ಸಂದರ್ಭದಲ್ಲಿ ನಿರ್ಧಾರ ತೆಗೆದುಕೊಳ್ಳಲು ಕಾಲಾವಕಾಶ ನೀಡುವಂತೆ ಸಿಬಿಎಸ್‌ಇ ಪರ ವಕೀಲ ರೂಪೇಶ್‌ ಕುಮಾರ್‌ ಕೋರಿದರು.

ಸಿಬಿಎಸ್‌ಇ ಮನವಿ ಪರಿಗಣಿಸಿದ ಪೀಠವು ಅರ್ಜಿ ವಿಚಾರಣೆಯನ್ನು ಜೂನ್‌ 23ಕ್ಕೆ ಮುಂದೂಡಿದೆ. ಕೋವಿಡ್‌–19 ಪ್ರಕರಣಗಳು ಏರಿಕೆಯಾಗುತ್ತಿರುವ ಕಾರಣ,ಅಂತಿಮ ಪರೀಕ್ಷೆ ನಡೆಸದೆ, ಪೂರ್ವಭಾವಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಪಡೆದ ಅಂಕಗಳನ್ನು ಪರಿಗಣಿಸಿ ಫಲಿತಾಂಶವನ್ನು ನೀಡಬೇಕು ಎಂದು ಪೋಷಕರು ಅರ್ಜಿಯಲ್ಲಿ ಕೋರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.