ADVERTISEMENT

ಮನೆಗೆಲಸದ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2020, 19:54 IST
Last Updated 15 ಜೂನ್ 2020, 19:54 IST
ಮನೆಗೆಲಸಮಾಡುವ ಕಾರ್ಮಿಕರನ್ನು ಸರ್ಕಾರ ಕಾರ್ಮಿಕರೆಂದು ನೋಂದಾಯಿಸಿಕೊಳ್ಳಬೇಕು ಎಂದು ಒತ್ತಾಯಿಸಿ 'ಡೊಮೆಸ್ಟಿಕ್ ವರ್ಕರ್ಸ್ ಯೂನಿಯನ್' ಮತ್ತು 'ಬೃಹತ್ ಬೆಂಗಳೂರು ಗೃಹ ಕಾರ್ಮಿಕರ ಸಂಘ'ದ ಸದಸ್ಯರು ನಗರದ ಕಾರ್ಮಿಕ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು -

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಮನೆಗೆಲಸದ ಮಹಿಳಾ ಕಾರ್ಮಿಕರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ನಗರದ ಕಾರ್ಮಿಕ ಇಲಾಖೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಗೃಹ ಕಾರ್ಮಿಕರ ಹಕ್ಕುಗಳ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ‘ಲಾಕ್‌ಡೌನ್‌ ಆದಾಗಿನಿಂದಲೂ ಕೆಲಸವಿಲ್ಲ. ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ’ ಎಂದು ಕಾರ್ಮಿಕರು ಅಳಲು ತೋಡಿಕೊಂಡರು.

‘ಮನೆಗೆಲಸದವರನ್ನು ಪುನಃ ಕೆಲಸಕ್ಕೆ ತೆಗೆದುಕೊಳ್ಳುವಂತೆ ಮನೆ ಮಾಲೀಕರಿಗೆ ಸೂಚಿಸಬೇಕು. ಮುಂದಿನ ಮೂರು ತಿಂಗಳವರೆಗೆ ಪ್ರತಿ ತಿಂಗಳು ₹10 ಸಾವಿರ ಪರಿಹಾರ ನೀಡಬೇಕು. ಸರ್ಕಾರ ನಮಗೂ ₹5 ಸಾವಿರ ಪರಿಹಾರ ಕೊಡಬೇಕು. ಮನೆಗೆಲಸ ಮಾಡುವ ಹಿರಿಯ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿ, ಪ್ರತಿ ತಿಂಗಳು 3 ಸಾವಿರ ನೀಡಬೇಕು’ ಎಂದೂ ಅವರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.