ADVERTISEMENT

Covid-19 Karnataka Update | ಒಂದೇ ದಿನ 1,839 ಪ್ರಕರಣ, 42 ಸೋಂಕಿತರು ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜುಲೈ 2020, 15:03 IST
Last Updated 4 ಜುಲೈ 2020, 15:03 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ಶುಕ್ರವಾರ ಸಂಜೆ 5 ರಿಂದ ಶನಿವಾರ ಸಂಜೆ 5 ರವರೆಗೆಬೆಂಗಳೂರಿನಲ್ಲಿ 1,172 ಪ್ರಕರಣಗಳು ಸೇರಿದಂತೆ ರಾಜ್ಯದಲ್ಲಿ ಒಟ್ಟು 1,839 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೇ ಅವಧಿಯಲ್ಲಿ 42 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 21,549ಕ್ಕೆ ಏರಿಕೆಯಾಗಿದೆ. ಇದರಲ್ಲಿ 9,244 ಸೋಂಕಿತರು ಗುಣಮುಖರಾಗಿದ್ದು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇನ್ನೂ 11,966 ಪ್ರಕರಣಗಳು ಸಕ್ರಿಯವಾಗಿವೆ. ಉಳಿದಂತೆ 335 ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಲ್ಲಿ 8,345 ಸಕ್ರಿಯ ಪ್ರಕರಣ
ರಾಜ್ಯ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ದಿನೇದಿನೇ ಗಣನೀಯವಾಗಿ ಹೆಚ್ಚುತ್ತಿದೆ. ಒಂದೇ ದಿನ ಸಾವಿರಕ್ಕೂ ಹೆಚ್ಚುಹೊಸ ಪ್ರಕರಣಗಳು ವರದಿಯಾಗಿದ್ದು,ಒಟ್ಟು ಸೋಂಕಿತರ ಸಂಖ್ಯೆ 8,345ಕ್ಕೆ ತಲುಪಿದೆ. ಈ ಪೈಕಿ 129 ಮಂದಿ ಮೃತಪಟ್ಟಿದ್ದಾರೆ. 965 ಸೋಂಕಿತರು ಗುಣಮುಖರಾಗಿದ್ದು, ಇನ್ನೂ 7,250 ಸಕ್ರಿಯ ಪ್ರಕರಣಗಳಿವೆ.

ADVERTISEMENT

ದಕ್ಷಿಣ ಕನ್ನಡದಲ್ಲಿ 1,087; ಬಳ್ಳಾರಿಯಲ್ಲಿ 1,154
ದಕ್ಷಿಣ ಕನ್ನಡ ಹಾಗೂ ಬಳ್ಳಾರಿಯಲ್ಲಿ ಇಂದು ಕ್ರಮವಾಗಿ 75 ಮತ್ತು73 ಪ್ರಕರಣಗಳು ವರದಿಯಾಗಿವೆ.ಈ ಎರಡೂ ಜಿಲ್ಲೆಗಳಲ್ಲಿ ಕ್ರಮವಾಗಿ 552 ಮತ್ತು 605 ಪ್ರಕರಣಗಳು ಸಕ್ರಿಯವಾಗಿವೆ.

ಶಿವಮೊಗ್ಗ: ಒಂದೇ ದಿನ 31 ಜನರಿಗೆ ಸೋಂಕು
ಶಿವಮೊಗ್ಗ ಜಿಲ್ಲೆಯಲ್ಲಿ ಶನಿವಾರ 31 ಜನರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಶಿವಮೊಗ್ಗ ನಗರ 13, ಶಿವಮೊಗ್ಗ ಗ್ರಾಮಾಂತರದಲ್ಲಿ 1 ಪ್ರಕರಣ ಪತ್ತೆಯಾಗಿದೆ. ಸೊರಬ ತಾಲ್ಲೂಕಿನಲ್ಲಿ 12, ಹೊಸನಗರ 2, ಶಿಕಾರಿಪುರ, ಸಾಗರ, ತೀರ್ಥಹಳ್ಳಿಯಲ್ಲಿ ತಲಾ ಒಂದು ಪ್ರಕರಣಗಳು ಪತ್ತೆಯಾಗಿವೆ. ಗ್ರಾಮೀಣ ಪ್ರದೇಶಗಳಲ್ಲೂ ವೈರಸ್‌ ಹರಡುತ್ತಿದ್ದು, ಸಮುದಾಯಕ್ಕೆ ಪಸರಿಸುವ ಆತಂಕ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.