ADVERTISEMENT

ನಾಳೆಯಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 7:52 IST
Last Updated 28 ಜೂನ್ 2020, 7:52 IST
   

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 29ರಿಂದ ಜುಲೈ 1ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 1ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮೀನುಗಾ
ರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಒಂದೇ ಅವಧಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದ ರಿಂದ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಮುಂಗಾರು ಚುರುಕಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ADVERTISEMENT

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಈಗಾಗಲೇ ಏರಿಕೆಯಾಗುತ್ತಿದೆ. ಜಲಾನಯನ ಭಾಗದಲ್ಲಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳ ಒಳಹರಿವಿನ ಪ್ರಮಾಣ ನಿಧಾನವಾಗಿ ಏರಲಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣವಿದೆ.

ಸಿದ್ಧಾಪುರ, ಸಿಂಧನೂರಿನಲ್ಲಿ ತಲಾ 5 ಸೆಂ.ಮೀ ಗರಿಷ್ಠ ಮಳೆಯಾಗಿದೆ. ದಾವಣಗೆರೆ 4, ಮಂಗಳೂರು, ಧರ್ಮಸ್ಥಳ, ಹಿರೇಕೆರೂರು, ಹಾವೇರಿ, ಪಾಂಡವಪುರ 3, ಕೋಟ, ಕೊಲ್ಲೂರು, ಕಾರ್ಕಳ, ನಿಪ್ಪಾಣಿ, ರಾಯಚೂರು, ಚಾಮರಾಜನಗರ, ಚಿಂತಾಮಣಿ 2 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.