ADVERTISEMENT

ಗೆಜೆಟೆಡ್‌ ಪ್ರೊಬೇಷನರಿ 106 ಹುದ್ದೆಗಳಿಗೆ ಅಧಿಸೂಚನೆ

​ಪ್ರಜಾವಾಣಿ ವಾರ್ತೆ
Published 30 ಜನವರಿ 2020, 19:45 IST
Last Updated 30 ಜನವರಿ 2020, 19:45 IST
   

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 106 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಿರ್ಧರಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕೆಪಿಎಸ್‌ಸಿ ಕಾರ್ಯದರ್ಶಿ ಜಿ. ಸತ್ಯವತಿ, ‘ಶುಕ್ರವಾರ (ಜ. 31) ಅಥವಾ ಶನಿವಾರ (ಫೆ.1) ಅಧಿಸೂಚನೆ ಹೊರಡಿಸಲಾಗುವುದು’ ಎಂದರು. ಒಂದು ವರ್ಷದೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಆಯೋಗ ತೀರ್ಮಾನಿಸಿದೆ.

ನಿಯಮದಲ್ಲಿ ಬದಲಾವಣೆ: ಈ ಬಾರಿ ನೇಮಕಾತಿ ನಿಯಮಗಳಲ್ಲಿ ಕೆಲವು ಬದಲಾವಣೆಗಳು ಇರಲಿವೆ. ಮುಖ್ಯಪರೀಕ್ಷೆಯಿಂದ 1:3 ಅನುಪಾತದಲ್ಲಿ ವ್ಯಕ್ತಿತ್ವ ಪರೀಕ್ಷೆಗೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಅಲ್ಲದೆ, ಮುಖ್ಯಪರೀಕ್ಷೆಯಲ್ಲಿ ತಲಾ 250 ಅಂಕಗಳ (ಒಟ್ಟು 500 ಅಂಕ) ಐಚ್ಛಿಕ ವಿಷಯವನ್ನು ಕೈ ಬಿಡುವ ಬಗ್ಗೆಯೂ ಕೆಪಿಎಸ್‌ಸಿ ಈಗಾಗಲೇ ತೀರ್ಮಾನಿಸಿದ್ದು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದರೆ ಒಟ್ಟು 1,250 ಅಂಕಗಳಿಗೆ ಮುಖ್ಯಪರೀಕ್ಷೆ ನಡೆಯಲಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.