ADVERTISEMENT

ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 7:33 IST
Last Updated 17 ಜೂನ್ 2020, 7:33 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪರೀಕ್ಷೆ ರದ್ದುಪಡಿಸುವಂತೆ ಕೋರಿ ಬೆಳಗಾವಿಯ ರಾಜಶ್ರೀ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ.

ಈ ಕುರಿತ ಅರ್ಜಿಯನ್ನು ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್, ಕೃಷ್ಣ ಮುರಾರಿ ಹಾಗೂ ಎಸ್.ರವೀಂದ್ರ ಭಟ್ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

'ಅರ್ಜಿ ವಿಚಾರಣೆಗೆ ಯೋಗ್ಯವಾಗಿಲ್ಲ. ಸರ್ಕಾರದ ನಿರ್ಧಾರದಲ್ಲಿ ಮಧ್ಯ ಪ್ರವೇಶ ಸರಿಯಲ್ಲ. ಈಗಾಗಲೇ ಈ ಸಂಬಂಧ ಹೈಕೋರ್ಟ್ ನೀಡಿರುವ ತೀರ್ಪು ಸರಿಯಾಗಿದೆ' ಎಂದು ನ್ಯಾಯಪೀಠ ಹೇಳಿದೆ.

ADVERTISEMENT

ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವದಗಿ ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಿಗದಿತ ವೇಳಾಪಟ್ಟಿಯ ಅನುಸಾರ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.