ADVERTISEMENT

ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ದೂರದರ್ಶನದಲ್ಲಿ ತರಗತಿ: ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2020, 10:52 IST
Last Updated 22 ಏಪ್ರಿಲ್ 2020, 10:52 IST
   

ಬೆಂಗಳೂರು: ಕೊರೋನಾದಿಂದಾಗಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ತಿಳಿಸಿದ್ದಾರೆ.

ಈ ತರಗತಿಗಳು ಏ.29ರಿಂದ ಪ್ರತಿ ದಿನ ಮಧ್ಯಾಹ್ನ 3ರಿಂದ 4.30ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ. ಮೊದಲ 16 ದಿನ ಪ್ರತಿ 45 ನಿಮಿಷಯಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

18ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಸಹ ಮಾಡಲಾಗುತ್ತದೆ. ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದೂ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.