ADVERTISEMENT

ತೊಗರಿ ಬೆಳೆ ನಷ್ಟ: ಹೆಕ್ಟೇರ್‌ಗೆ ₹ 10 ಸಾವಿರ ಪರಿಹಾರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2023, 18:42 IST
Last Updated 24 ಜನವರಿ 2023, 18:42 IST
   

ಬೆಂಗಳೂರು: ಬೀದರ್‌, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆ ಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ, ಬಾಧಿತ ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹ 10 ಸಾವಿರದಂತೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಗರಿಷ್ಟ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಪರಿ ಹಾರ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಒಟ್ಟು ಪರಿ
ಹಾರ ಮೊತ್ತವು ₹ 223 ಕೋಟಿ ಆಗಬಹುದೆಂದು ಅಂದಾಜಿಸಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಅಧಿಕಾರಿ‌ ಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ 3 ಜಿಲ್ಲೆಗಳಲ್ಲಿ ಅಕಾಲಿಕ ಮಳೆ, ನವೆಂಬರ್ ತಿಂಗಳಿ ನಲ್ಲಿ ತಲೆದೋರಿದ ಒಣ, ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಉಲ್ಬಣಗೊಂಡಿತ್ತು. ಸಂಕೀರ್ಣ ನೆಟೆ ರೋಗಕ್ಕೆ ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ್‌ ಜಿಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್, ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಸೇರಿ ಒಟ್ಟು 2.2278 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ತೊಗರಿ ಬೆಳೆ ಹಾನಿಯಾಗಿರುವುದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT