ಯಕ್ಷಗಾನದ ಮೊದಲ ಮಹಿಳಾ ಭಾಗವತರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ, ತಮ್ಮ ಕಂಠ ಸಿರಿಯಿಂದಲೇ ಕರಾವಳಿಯಲ್ಲಿ ಮನೆಮಾತಾಗಿದ್ದ ಲೀಲಾವತಿ ಬೈಪಾಡಿತ್ತಾಯ (77) ಅವರು ಶನಿವಾರ (ಡಿ.14) ನಿಧನರಾದರು.
(ಪ್ರಜಾವಾಣಿ ಚಿತ್ರ)
ಲೀಲಾವತಿ ಬೈಪಾಡಿತ್ತಾಯ ಅವರಿಗೆ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ಹಾಗೂ 2010ನೇ ಸಾಲಿನಲ್ಲಿ ಕರ್ನಾಟಕದ ಯಕ್ಷಗಾನ ಅಕಾಡೆಮಿ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
2012ರಲ್ಲಿ ಸಾಧಕ ಹಿರಿಯ ನಾಗರಿಕ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.
ಯಕ್ಷಗಾನದ ವೃತ್ತಿ ಮೇಳಗಳಲ್ಲಿ ತಿರುಗಾಟ ನಡೆಸಿದ ಏಕೈಕ ಮಹಿಳಾ ಭಾಗವತರು ಎಂಬ ಶ್ರೇಯವೂ ಅವರಿಗಿದೆ. ಲೀಲಾವತಿ ಅವರು ಅನೇಕ ಮಹಿಳೆಯರಿಗೆ ಯಕ್ಷಗಾನದ ಭಾಗವತಿಕೆ ಕಲಿಸಿದ್ದಾರೆ.
ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ ದಂಪತಿ
ಮಂಗಳೂರಿನ ಮಂಗಳಾದೇವಿ ಸನ್ನಿಧಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯಕ್ಷ ಪ್ರತಿಭೆಯ 15ನೇ ವರ್ಷದ ಸಂಭ್ರಮದಲ್ಲಿ ಲೀಲಾವತಿ ಬೈಪಡಿತ್ತಾಯ– ಹರಿನಾರಾಯಣ ಬೈಪಾಡಿತ್ತಾಯ ದಂಪತಿಯನ್ನು ಗೌರವಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.