ADVERTISEMENT

ಲಲಿತ್ ಜೆ.ರಾವ್‌ಗೆ ‘ಸಂಗೀತ ವಿದ್ವಾನ್’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2022, 16:10 IST
Last Updated 25 ಸೆಪ್ಟೆಂಬರ್ 2022, 16:10 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕೊಡಮಾಡುವ ರಾಜ್ಯಮಟ್ಟದ ‘ಸಂಗೀತ ವಿದ್ವಾನ್’ ಪ್ರಶಸ್ತಿಗೆ ಹಿಂದೂಸ್ತಾನಿ ಸಂಗೀತ ಗಾಯಕಿ ಲಲಿತ್‌ ಜೆ.ರಾವ್ ಅವರನ್ನು ಆಯ್ಕೆ ಮಾಡಲಾಗಿದೆ.

ಸೆ.26ರಂದು ಸಂಜೆ 6ಕ್ಕೆ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯು ₹ 5 ಲಕ್ಷ, ಫಲಕ ಮತ್ತು ಸನ್ಮಾನವನ್ನು ಒಳಗೊಂಡಿದೆ ಎಂದು ದಸರಾ ಸಾಂಸ್ಕೃತಿಕ ಸಮಿತಿ ಸದಸ್ಯ ಕಾರ್ಯದರ್ಶಿ ಡಾ.ಎಂ.ಡಿ.ಸುದರ್ಶನ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT