ADVERTISEMENT

ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಕಲಾತಂಡಗಳ ಮೆರುಗು

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2024, 4:04 IST
Last Updated 20 ಡಿಸೆಂಬರ್ 2024, 4:04 IST
   

ಮಂಡ್ಯ: ಇಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ರಾಜ್ಯ ಮತ್ತು ಹೊರರಾಜ್ಯದ ಕಲಾತಂಡಗಳು ಗಮನ ಸೆಲೆದಿವೆ.

ನಂದಿಧ್ವಜ, ಚಕ್ಕಡಿಗಾಡಿ, ಕೊಂಬುಕಹಳೆ, ನಾದಸ್ವರ, ಸ್ತಬ್ಧಚಿತ್ರ, ವೀರಗಾಸೆ, ತಮಟೆ, ಕಂಸಾಳೆ, ಮಹಿಳಾ ವೀರಗಾಸೆ, ಕೀಲುಕುದುರೆ, ಜಗ್ಗಲಿಗೆ ಮೇಳ, ಪೂರ್ಣಕುಂಭ, ನಗಾರಿ, ಛತ್ರಿಚಾಮರ, ಲಿಡಕರ್ ಸ್ತಬ್ಧಚಿತ್ರ, ಖಾಸಬೇಡರಪಡೆ, ಭಾಗವಂತಿಕೆ, ಹಗಲು ವೇಷ, ಅರೆವಾದ್ಯ, ಪೆಟ್ಟಿಗೆ ಮಾರಮ್ಮ, ಕೋಲಾಟ, ಗಾರುಡಿಗೊಂಬೆ, ಕರಗ, ಚಿಲಿಪಿಲಿ ಗೊಂಬೆ, ದಾಸಪ್ಪ ಜೋಗಪ್ಪ, ಬೆಂಕಿಭರಾಟೆ, ದೊಣ್ಣೆ ವರಸೆ, ಚಿಟ್ಟಲಗಿ ಮೇಳ, ಷಹನಾಯವಾದನ, ಗಾರುಡಿ ಗೊಂಬೆ, ಯಕ್ಷಗಾನ ಗೊಂಬೆ, ವಾನರಸೇನೆ, ಕರಡಿ ಮಜಲು, ದೇವಿ ವೇಷಧಾರಿ, ಕೀಲು ಕುದುರೆ, ನೃತ್ಯ, ಮರಗಾಲು, ಮುಳ್ಳು ಕುಣಿತ, ಡೊಳ್ಳು ಕುಣಿತ, ಪೂಜಾಕುಣಿತ, ಡೊಳ್ಳು ಕುಣಿತ, ಹಾಲಕ್ಕಿ ಸುಗ್ಗಿ ಕುಣಿತ, ಪಟಕುಣಿತ, ರಂಗದಕುಣಿತ, ಮಹಿಳಾ ಡೊಳ್ಳು ಕುಣಿತ, ಸೋಮನ ಕುಣಿತ, ಗೊರವರ ಕುಣಿತ, ಲಂಬಾಣಿ ನೃತ್ಯ, ಕೋಳಿ ನೃತ್ಯ, ಕೊಡವ ನೃತ್ಯ, ಜೋಗತಿ ನೃತ್ಯ,  ವೀರಮಕ್ಕಳ ಕುಣಿತ, ಸತ್ತಿಗೆ ಕುಣಿತ,  ದಟ್ಟಿ ಕುಣಿತ,  ಹಲಗು ಕುಣಿತ, ಪಟಕುಣಿತ, ನಾಲ್ವಡಿ ಕೃಷ್ಣರಾಜ ಒಡೆಯರ್, ಕೆಂಪೇಗೌಡ, ವಿಶ್ವೇಶ್ವರಯ್ಯ ವೇಷಧಾರಿ, ಅಶ್ವಾರೋಹಿ ದಳ, ಟಾಂಗಾ ಗಾಡಿ, ಎತ್ತಿನ ಗಾಡಿ, ಸಮ್ಮೇಳನಾಧ್ಯಕ್ಷರ ಭಾವಚಿತ್ರ ಒಳಗೊಂಡ 87 ಆಟೋ ರಿಕ್ಷಾಗಳು, ಸ್ಕೌಟ್ಸ್ ಮತ್ತು ಗೈಟ್ಸ್, ಎನ್ ಸಿಸಿ, ಭಾರತ್ ಸೇವಾದಳ ತಂಡ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು.

ಹೊರರಾಜ್ಯದ ಕಲಾ ಪ್ರಕಾರಗಳು

ADVERTISEMENT

ತಮಿಳುನಾಡಿನ ಕರಗಂ, ಒಡಿಶಾದ ಸಂಬಲ್ಪುರಿ ಮತ್ತು ಧಾಪ್ ಬುಡಕಟ್ಟು ನೃತ್ಯ, ಮಧ್ಯಪ್ರದೇಶದ ಬಧಾಯಿ ಮತ್ತು ನೋರಾ, ಕಲಾ ಪ್ರಕಾರಗಳು ಒಳಗೊಂಡಂತೆ, ನಾನಾ ಜಿಲ್ಲೆಯ ನೂರಾರು ಕಲಾತಂಡಗಳು ಸಮ್ಮೇಳನಾಧ್ಯಕ್ಷರ ಮೆರವಣಿಗೆಯಲ್ಲಿ ಸಾಗಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.