
ದೇವರನ್ನು ಪೂಜಿಸುವಾಗ ದೀಪ ಹಚ್ಚುವುದು ಸಾಮಾನ್ಯ. ಇದು ಹಿಂದೂಗಳ ಸಂಪ್ರದಾಯವೂ ಹೌದು. ದೀಪವನ್ನು ವಿವಿಧ ಬಗೆಯ ಎಣ್ಣೆಗಳಿಂದ ಹಚ್ಚಲಾಗುತ್ತದೆ. ಯಾವ ಎಣ್ಣೆಯಿಂದ ದೀಪ ಹಚ್ಚುವುದರಿಂದ ಏನೆಲ್ಲಾ ಲಾಭ ದೊರೆಯುತ್ತವೆ ಎಂಬುದನ್ನು ನೋಡೋಣ.
ಕೊಬ್ಬರಿ ಎಣ್ಣೆಯಲ್ಲಿ ದೀಪ ಹಚ್ಚಿದರೆ, ವ್ಯಾಪಾರ, ವ್ಯವಹಾರದಲ್ಲಿ ಲಾಭ ಪ್ರಾಪ್ತಿಯಾಗುತ್ತದೆ. ಜೊತೆಗೆ ಹಣಕಾಸಿನ ಸಮಸ್ಯೆಯೂ ದೂರಾಗುತ್ತದೆ ಎಂಬ ನಂಬಿಕೆ ಇದೆ.
ತುಪ್ಪದಿಂದ ಹಚ್ಚುವ ದೀಪ ಸರ್ವ ಶ್ರೇಷ್ಠವೆಂದು ಹೇಳಲಾಗುತ್ತದೆ. ಇದರಿಂದ ಲಕ್ಷ್ಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ.
ಬೇವಿನ ಎಣ್ಣೆಯಲ್ಲಿ ದೀಪ ಹಚ್ಚುವುದರಿಂದ ಸಾಂಕ್ರಾಮಿಕ ರೋಗಗಳು ದೂರವಾಗಿ, ಮನೆಯಲ್ಲಿ ನೆಮ್ಮದಿ, ಶಾಂತಿ ಲಭಿಸುತ್ತದೆ ಎಂಬ ನಂಬಿಕೆ ಇದೆ.
ಸಾಸಿವೆ ಎಣ್ಣೆಯ ದೀಪವನ್ನು ಮನೆಯಲ್ಲಿ ಹಚ್ಚುವುದರಿಂದ ಗ್ರಹದೋಷ ನಿವಾರಣೆಯಾಗುತ್ತದೆ.
ಕೊಬ್ಬರಿ ಎಣ್ಣೆಯ ದೀಪ ಹಚ್ಚುವುದರಿಂದ ಧನ ಪ್ರಾಪ್ತಿಯಾಗುತ್ತದೆ. ಅಲ್ಲದೇ ದೃಷ್ಟಿ ದೋಷ ಮತ್ತು ಸಾಲ ಭಾದೆ ನಿವಾರಣೆಯಾಗುತ್ತದೆ ಎಂಬ ನಂಬಿಕೆ ಇದೆ.
ಅಂಕೋಲಾ ಹಾಗೂ ಕಸ್ತೂರಿ ತೈಲದಿಂದ ದೀಪ ಹಚ್ಚಿದರೆ, ಹಣಕಾಸಿನ ಸಮಸ್ಯೆ ದೂರವಾಗುತ್ತವೆ ಎಂಬ ನಂಬಿಕೆ ಇದೆ.
ಈ ಎಣ್ಣೆಗಳಲ್ಲಿ ದೀಪ ಹಚ್ಚುವುದರಿಂದ ಗ್ರಹದೋಷ ನಿವಾರಣೆಯಾಗುತ್ತದೆ ಎಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.