ನಿಸಾನ್ ಮೋಟರ್ ಇಂಡಿಯಾ ಕಂಪನಿಯು ನವದೆಹಲಿಯಲ್ಲಿ ನಿಸಾನ್ ಮ್ಯಾಗ್ನೈಟ್ ಕಾರನ್ನು ಬಿಡುಗಡೆ ಮಾಡಿತು. ಈ ವೇಳೆ ಕಂಪನಿಯ ಅಧಿಕಾರಿಗಳು ಇದ್ದರು
ಬೆಂಗಳೂರು: ನಿಸಾನ್ ಮೋಟರ್ ಇಂಡಿಯಾ ಕಂಪನಿಯು, ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಹೊಸ ನಿಸಾನ್ ಮ್ಯಾಗ್ನೈಟ್ ಕಾರನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ಈ ವಾಹನದ ಎಕ್ಸ್ ಷೋ ರೂಂ ಬೆಲೆ ₹5.99 ಲಕ್ಷ ಆಗಿದ್ದು, 20ಕ್ಕೂ ಹೆಚ್ಚು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಚೆನ್ನೈ ಘಟಕದಲ್ಲಿ ತಯಾರಿಸಲಾದ ಈ ವಾಹನವು ಈಗಾಗಲೇ ಮಾರುಕಟ್ಟೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 65ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗುವುದು ಎಂದು ಕಂಪನಿ ತಿಳಿಸಿದೆ.
ರಿಮೋಟ್ ಎಂಜಿನ್ ಸ್ಟಾರ್ಟ್, ನಿಸಾನ್ ಅರೌಂಡ್ ವ್ಯೂ ಮಾನಿಟರ್, ಆಂಡ್ರಾಯ್ಡ್ ಆಟೊ ಮತ್ತು ಆ್ಯಪಲ್ ಕಾರ್‌ಪ್ಲೇಯೊಂದಿಗೆ ಟಚ್‌ಸ್ಕ್ರೀನ್ ಇನ್ಫೊಟೈನ್‌ಮೆಂಟ್ ಸಿಸ್ಟಂ ಇತ್ಯಾದಿ ತಾಂತ್ರಿಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಆರು ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಟ್ರಾಕ್ಷನ್ ಕಂಟ್ರೋಲ್ ಸಿಸ್ಟಂ, ಹೈಡ್ರಾಲಿಕ್ ಬ್ರೇಕ್ ಅಸಿಸ್ಟ್ ಸೇರಿದಂತೆ 40ಕ್ಕೂ ಹೆಚ್ಚು ಪ್ರಮಾಣಿತ ಸುರಕ್ಷತಾ ವೈಶಿಷ್ಟ್ಯ ಹೊಂದಿದೆ.
6 ಮೊನೊಟೋನ್ ಮತ್ತು 5 ಡ್ಯುಯಲ್-ಟೋನ್ ಸೇರಿ 11 ಬಣ್ಣಗಳಲ್ಲಿ ಲಭ್ಯವಿದೆ. ಪ್ರೀಮಿಯಂ ಮತ್ತು ಐಷಾರಾಮಿ ಇಂಟೀರಿಯರ್ ಗಳನ್ನು ಒಳಗೊಂಡಿದೆ. ಪ್ರತಿ ಲೀಟರ್ ಪೆಟ್ರೋಲ್‌ಗೆ 20 ಕಿ.ಮೀ ಮೈಲೇಜ್ ನೀಡಲಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.