ನವದೆಹಲಿ : ವಾಹನ್ ಪೋರ್ಟಲ್‌ನಲ್ಲಿ ದ್ವಿಚಕ್ರವಾಹನಗಳ ನೋಂದಣಿ ಮತ್ತು ಮಾರಾಟದ ವ್ಯತ್ಯಾಸಕ್ಕೆ ಸಂಬಂಧಿಸಿದಂತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವಾಲಯ ಮತ್ತು ರಸ್ತೆ ಸಾರಿಗೆ ಸಚಿವಾಲಯದಿಂದ ವಿವರಣೆ ಕೋರಿ ನೋಟಿಸ್ ಸ್ವೀಕರಿಸಲಾಗಿದೆ ಎಂದು ಓಲಾ ಎಲೆಕ್ಟ್ರಿಕ್ ಕಂಪನಿಯು, ಶುಕ್ರವಾರ ಷೇರುಪೇಟೆಗೆ ಮಾಹಿತಿ ನೀಡಿದೆ.
ವ್ಯಾಪಾರ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆಯೂ ವಿವರಣೆ ಕೇಳಲಾಗಿದೆ. ಎರಡು ಸಚಿವಾಲಯಗಳು ನೀಡಿರುವ ನೋಟಿಸ್‌ಗೆ ಉತ್ತರ ನೀಡಲಾಗುವುದು ಎಂದು ತಿಳಿಸಿದೆ.
ನಾಲ್ಕು ರಾಜ್ಯಗಳಿಂದ ವ್ಯಾಪಾರ ಪ್ರಮಾಣ ಪತ್ರಕ್ಕೆ ಸಂಬಂಧಿಸಿದಂತೆ ನೋಟಿಸ್ ಸ್ವೀಕರಿಸಲಾಗಿದೆ. ಇದಕ್ಕೂ ಉತ್ತರಿಸಲಾಗುವುದು ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.