ADVERTISEMENT

ಹುಂಡೈ, ಹೋಂಡಾ ವಾಹನ ದರ ಏರಿಕೆ

ಪಿಟಿಐ
Published 19 ಮಾರ್ಚ್ 2025, 14:15 IST
Last Updated 19 ಮಾರ್ಚ್ 2025, 14:15 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ವಾಹನ ತಯಾರಿಕಾ ಕಂಪನಿಗಳಾದ ಹುಂಡೈ ಮೋಟರ್‌ ಇಂಡಿಯಾ ಮತ್ತು ಹೋಂಡಾ ಕಾರ್ಸ್ ಇಂಡಿಯಾ ವಾಹನಗಳ ಬೆಲೆ ಏರಿಕೆಗೆ ನಿರ್ಧರಿಸಿದ್ದು, ಈ ಪರಿಷ್ಕೃತ ದರವು ಏಪ್ರಿಲ್‌ನಿಂದ ಜಾರಿಗೆ ಬರಲಿದೆ.

ಶೇ 3ರಷ್ಟು ದರ ಹೆಚ್ಚಳ ಮಾಡುವುದಾಗಿ ಹುಂಡೈ ತಿಳಿಸಿದೆ. ಹೋಂಡಾ ಕೂಡ ತನ್ನ ಎಲ್ಲಾ ಮಾದರಿಯ ವಾಹನಗಳ ಬೆಲೆ ಹೆಚ್ಚಿಸಲು ಮುಂದಾಗಿದೆ. ಆದರೆ, ಎಷ್ಟು ದರ ಹೆಚ್ಚಳ ಮಾಡಲಾಗುತ್ತಿದೆ ಎಂಬ ಬಗ್ಗೆ ಕಂಪನಿಯು ತಿಳಿಸಿಲ್ಲ. 

ತಯಾರಿಕಾ ಮತ್ತು ಕಾರ್ಯಾಚರಣೆ ವೆಚ್ಚ ಸರಿದೂಗಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂಪನಿಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.