ನವದೆಹಲಿ: ಮಹೀಂದ್ರ ಆ್ಯಂಡ್ ಮಹೀಂದ್ರ ಕಂಪನಿಯು ಎಸ್‌ಯುವಿ ಮತ್ತು ವಾಣಿಜ್ಯ ವಾಹನಗಳ ಬೆಲೆಯನ್ನು ಶೇ 3ರಷ್ಟು ಏರಿಕೆ ಮಾಡಿದೆ. ಏಪ್ರಿಲ್‌ನಿಂದ ಈ ಪರಿಷ್ಕೃತ ದರವು ಜಾರಿಗೆ ಬರಲಿದೆ.
ವಾಹನಗಳ ತಯಾರಿಕಾ ವೆಚ್ಚದಲ್ಲಿ ಹೆಚ್ಚಳವಾಗಿದೆ. ಸರಕುಗಳ ಬೆಲೆ ಕೂಡ ದುಬಾರಿಯಾಗಿದೆ. ಹಾಗಾಗಿ, ದರ ಏರಿಕೆ ಮಾಡುವುದು ಅನಿವಾರ್ಯವಾಗಿದೆ ಎಂದು ತಿಳಿಸಿದೆ.
ಈಗಾಗಲೇ ಮಾರುತಿ ಸುಜುಕಿ ಇಂಡಿಯಾ, ಹುಂಡೈ ಮೋಟರ್, ಟಾಟಾ ಮೋಟರ್ಸ್, ಕಿಯಾ, ಬಿಎಂಡಬ್ಲ್ಯು, ಹೋಂಡಾ ಕಾರ್ಸ್ ಕಂಪನಿಯು ವಾಹನಗಳ ಬೆಲೆ ಹೆಚ್ಚಿಸುವುದಾಗಿ ಪ್ರಕಟಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.